ನ್ಯೂಸ್

ಭಾರೀ ಮಳೆ; ದೇವನಹಳ್ಳಿಯಲ್ಲಿ ನಡೆಯಬೇಕಿದ್ದ ಅಮಿತ್ ಷಾ ರೋಡ್‌ಶೋ ರದ್ದು!

ಬೆಂಗಳೂರು: ಭಾರೀ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ದೇವನಹಳ್ಳಿ ತಾಲೂಕನ ವಿಜಯಪುರ ಪಟ್ಟಣದಲ್ಲಿ ನಡೆಯಬೇಕಿದ್ದ ಕೇಂದ್ರ ಗೃಹ ಸಚಿವ ಅಮಿತ್ ಷಾ ರೋಡ್‌ಶೋ ರದ್ದು ಮಾಡಲಾಗಿದೆ.

ಅಮಿತ್ ಶಾ ಅವರು ಇಂದು ಬೆಂಗಳೂರಿಗೆ ಭೇಟಿ ನೀಡಿದ್ದು, ಈ ವೇಳೆ ತಾಲ್ಲೂಕಿನಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಬೇಕಿತ್ತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ  ಅಮಿತ್ ಷಾ ಆಗಮಿಸಿದ್ದಾರೆ.

ಮಳೆಯಿಂದಾಗಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿಯು ರೋಡ್ ಶೋ ರದ್ದುಗೊಳಿಸಲು ನಿರ್ಧರಿಸಿದೆ. ಮಳೆಯ ಕಾರಣ ಕಾರ್ಯಕರ್ತರು ಆಗಮನ ವಿಳಂಬ ರೋಡ್​ಶೋ ಮುಂದೂಡಿದ್ದಾರೆ ಎನ್ನಲಾಗಿದೆ.

ಬಿಜೆಪಿ ತನ್ನ ಎಲ್ಲಾ 224 ಅಭ್ಯರ್ಥಿಗಳ ಹೆಸರುಗಳನ್ನು ಘೋಷಿಸಿದ ನಂತರ ಅಮಿತ್ ಶಾ ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ವಿಜಯಪುರ ಬದಲಿಗೆ ಬೆಂಗಳೂರಿನತ್ತ ಅಮಿತ್ ಷಾ ತೆರಳಿದ್ದಾರೆ. ಪಕ್ಷದ ರಾಜ್ಯ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ ಎನ್ನಲಾಗಿದೆ.