ನ್ಯೂಸ್

ಮಳೆಯ ಅಬ್ಬರ: ಈ ರಾಜ್ಯದ 8 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ!

ತಮಿಳುನಾಡು: ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದ ತಮಿಳುನಾಡಿನ 8 ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮಳೆಯ ಅಬ್ಬರ ಮುಂದುವರಿಯುಲಿದೆ.

ತಮಿಳುನಾಡು, ಪುದುಚೇರಿ ಸೇರಿದಂತೆ ಕೇರಳದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಈ ಪ್ರದೇಶಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ಥೇಣಿ ಜಿಲ್ಲಾಡಳಿತವು ಈಗಾಗಲೇ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದು, ತಿರುನೆಲ್ವೇಲಿ, ಕನ್ಯಾಕುಮಾರಿ, ತೆಂಕಶಿ, ಪುದುಕೊಟ್ಟೈ, ತುತ್ತುಕುಡಿ, ವಿರುದುನಗರ ಮತ್ತು ನೀಲಗಿರಿ ಸೇರಿದಂತೆ ಏಳು ಜಿಲ್ಲೆಗಳಲ್ಲಿ ಗುರುವಾರ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಶಾಲೆಗಳಿಗೆ ರಜೆ ಘೋಷಿಸಿದೆ.

ಭಾರೀ ಮಳೆಗೆ ಚೆನ್ನೈನಲ್ಲಿ ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್ ಕಾರ್ಪೊರೇಷನ್ (MTC) ಬಸ್ ನೀರಿನಿಂದ ತುಂಬಿದ ತಗ್ಗು ಪ್ರದೇಶದ ಸುರಂಗಮಾರ್ಗದಲ್ಲಿ ಸಿಲುಕಿಕೊಂಡಿದ್ದು, ಜನರ ಸಂಚಾರ ಅಸ್ತವ್ಯಸ್ತಗೊಂಡಿದೆ. ಬುಧವಾರ (ನ.22) ಭಾರೀ ಮಳೆಯಿಂದಾಗಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ಹಲವು ಭಾಗಗಳು ತೀವ್ರ ಜಲಾವೃತಗೊಂಡಿವೆ. ಪತ್ತನಂತಿಟ್ಟ ಮತ್ತು ರಾಜ್ಯದ ಇತರ ಎರಡು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

ಜಿಲ್ಲೆಯಲ್ಲಿ ಬುಧವಾರ ಕೇವಲ ಎರಡು ಗಂಟೆಗಳಲ್ಲಿ 210 ಮಿಮೀ ಮಳೆಯಾಗಿದ್ದು, ಭೂಕುಸಿತ ಉಂಟಾಗಿ ಶಬರಿಮಲೆ ಹೆದ್ದಾರಿಯಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ ಎಂದು ವರದಿಯೊಂದು ಉಲ್ಲೇಖಿಸಿದೆ,(ಏಜೆನ್ಸೀಸ್).