ಬೆಂಗಳೂರು: ( Karnataka Weather Alert ) ಕರ್ನಾಟಕದ ಹಲವೆಡೆ ಮಳೆಯಾದರೂ ಮತ್ತೆ ಸೆಕೆ ಶುರುವಾಗಿದೆ, ಮುಂದಿನ 4 ದಿನಗಳ ಕಾಲ ಸಾಕಷ್ಟು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಾರ್ಚ್ 25 ಮತ್ತು 26ನೇ ತಾರೀಕಿನಂದು ಧಾರಾಕಾರ ಮಳೆಯಾದರೆ, 27 ಮತ್ತು 28ರಂದು ಸಾಧಾರಣ ಹನಿಮಳೆ ಬೀಳುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದೆ.
ದಕ್ಷಿಣ ಮತ್ತು ಉತ್ತರ ಒಳನಾಡಿನಲ್ಲಿ ಅತೀ ಹೆಚ್ಚು ಮಳೆಯಾಗಲಿದ್ದು, ಜನ ಎಚ್ಚರಿಕೆಯಿಂದ ಇರಬೇಕು. ಬೆಂಗಳೂರು, ಚಿಂತಾಮಣಿ ಮತ್ತು ವಿರಾಜಪೇಟೆ, ದೇವನಹಳ್ಳಿ ಕಡೆ 5 ಸೆಂಟಿ ಮೀಟರ್ ಮಳೆ ಬೀಳಲಿದೆ. ಕರಾವಳಿ ಕರ್ನಾಟಕದಲ್ಲೂ ಮುಂದಿನ ಒಂದು ವಾರ ಗುಡುಗು ಸಹಿತ ಜೋರು ಮಳೆ ಆಗಲಿದೆ ಎಂದು ಅಲರ್ಟ್ ನೀಡಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ.
ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ರಾಯಚೂರು, ಕೊಪ್ಪಳ, ಕಲಬುರಗಿ, , ಬೀದರ್ನಲ್ಲಿ ಒಣಹವೆ ಇರಲಿದೆ.