ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಭರ್ಜರಿ ಮಳೆ ಸುರಿಯುತ್ತಿದೆ. ನವದೆಹಲಿಯ ಹಲವು ಪ್ರದೇಶಗಳಲ್ಲಿ ಆಲಿಕಲ್ಲು ಹಾಗೂ ಗುಡುಗು, ಗಾಳಿ ಸಹಿತ ಮಳೆ ಇಂದು ಮಧ್ಯಾಹ್ನದಿಂದಲೇ ಪ್ರಾರಂಭವಾಗಿದೆ.
ವಿಪರೀತ ಮಳೆಯಿಂದಾಗಿ ದೆಹಲಿಯ ಕೆಲವು ಕಡೆ ವಿಪರೀತ ಟ್ರಾಫಿಕ್ ಜಾಮ್ ಆಗಿದೆ. ದೆಹಲಿಯಲ್ಲಿ ಇಂದು ಬೆಳಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ಮುಂಜಾನೆ ಆರ್ದ್ರತೆಯ ಮಟ್ಟ ಶೇ.88ರಷ್ಟು ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ತಿಳಿಸಿದೆ. ಹಾಗೇ ಸಂಜೆ ಹೊತ್ತಿಗೆ ಇನ್ನೂ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಿದೆ.
ದೆಹಲಿ ಮಳೆಯ ಫೋಟೋಗಳು, ವಿಡಿಯೋಗಳು ಸಾಮಾಜಿಕ ಜಾಲತಾಣಗಳಾದ ಟ್ವಿಟರ್, ಫೇಸ್ಬುಕ್, ಇನ್ಸ್ಟಾಗ್ರಾಂಗಳಲ್ಲಿ ಹೆಚ್ಚೆಚ್ಚು ವೈರಲ್ ಆಗಿವೆ. #DelhiRain ಹ್ಯಾಷ್ಟ್ಯಾಗ್ನಡಿ ಅನೇಕ ಫೋಟೋಗಳನ್ನು ದೆಹಲಿ ನಿವಾಸಿಗಳು ಅಪ್ಲೋಡ್ ಮಾಡುತ್ತಿದ್ದಾರೆ. (ಏಜೆನ್ಸೀಸ್)