Weather Update 23-10-2023: ರಾಜ್ಯದಲ್ಲಿ ಅಕ್ಟೋಬರ್ 24ರವರೆಗೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಷ್ಟು ದಿನಗಳ ಮಳೆಯಾಗದ ಹಿನ್ನೆಲೆ ರಾಜ್ಯದ ಪ್ರಮುಖ ಜಲಶಾಯಗಳಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ, ಇನ್ನೂ ಅಕ್ಟೋಬರ್ 24 ರಿಂದ ಮೂರು ದಿನಗಳ ಕಾಲ ವರುಣ ಅಬ್ಬರಿಸಲಿದ್ದಾನೆ ಎಂದು ಹೇಳಲಾಗಿದೆ. ಈಗಾಗಲೇ ರಾಜ್ಯದಲ್ಲಿ ಮುಂಗಾರು ಮಳೆ ಪೂರ್ಣಗೊಂಡಿದ್ದು, ಹಿಂಗಾರು ಚುರುಕುಗೊಂಡಿದೆ.
ಇಂದು ಮತ್ತು ನಾಳೆ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದ್ದು, ಮುಂದಿನ 2 ದಿನಗಳ ಕಾಲ ಕರಾವಳಿ, ಮಲೆನಾಡು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಲಿದೆ. ಇನ್ನುಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಇರಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದ್ದು, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ನಿರೀಕ್ಷೆಗಳಿವೆ. ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಕೊಡಗು, ಹಾಸನ, ಚಿಕ್ಕಮಗಳೂರು, ಮೈಸೂರು ಮತ್ತು ಚಾಮರಾಜನಗರದಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಅಲ್ಲದೇ ಮೈಸೂರು, ಕೊಡಗು ಜಿಲ್ಲೆಗಳಲ್ಲಿ ತುಂಬಾ ಮಳೆ ಬರಲಿದೆಯಾಗುವ ಸಾಧ್ಯತೆ ಇದೆ ಎನ್ನಲಾಗಿದ್ದು, ಸಂಜೆ ವೇಳೆಗೆ ವರುಣನ ಅಬ್ಬರ ಹೆಚ್ಚಗಲಿದೆ ಎನ್ನಲಾಗಿದೆ.
ಬೆಂಗಳೂರು ನಗರದಲ್ಲೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಮಳೆ ಸುರಿಯುಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.