ನ್ಯೂಸ್

ರಾಜ್ಯದಲ್ಲಿ ಮತ್ತೆ 2 ದಿನ ಭಾರಿ ಮಳೆ: ಅಪ್ಪಳಿಸಲಿದೆ ನಿವಾರ್​ ಚಂಡಮಾರುತ

ಬೆಂಗಳೂರು: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗಲಿದೆ. ಪರಿಣಾಮ ಮಂಗಳವಾರ(ನ.24) ತಮಿಳುನಾಡಿನ ಕೆಲ ಭಾಗಗಳಲ್ಲಿ "ನಿವಾರ್​' ಎಂಬ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ.

ಇದರ ಪರಿಣಾಮ ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.24 ಮತ್ತು 25ರಂದು ಸಾಧಾರಣ ಮಳೆಯಾದರೆ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ ಹಾಗೂ ತುಮಕೂರಿನಲ್ಲಿ ನ.26, 27ರಂದು ಭಾರಿ ಮಳೆಯಾಗಲಿದೆ.

ಈ ಹಿನ್ನೆಲೆಯಲ್ಲಿ ಯೆಲ್ಲೋ ಅರ್ಲಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.