ನ್ಯೂಸ್

ಕರ್ನಾಟಕ ಸೇರಿ 20 ರಾಜ್ಯಗಳಿಗೆ ಭಾರಿ ಮಳೆಯ ಎಚ್ಚರಿಕೆ; ಐಎಂಡಿ ಮುನ್ಸೂಚನೆ| Rain

ಮುಂದಿನ 5 ದಿನಗಳಲ್ಲಿ ಈಶಾನ್ಯ ಭಾರತದಲ್ಲಿ ಗುಡುಗು, ಮಿಂಚು ಮತ್ತು ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆ.

ನವದೆಹಲಿ: ಇಂದಿನಿಂದ ಮೇ 27 ರವರೆಗೆ ಕೇರಳ, ಕರಾವಳಿ ಮತ್ತು ಕರ್ನಾಟಕದ ದಕ್ಷಿಣ ಒಳನಾಡ ಸೇರಿದಂತೆ ಮುಂದಿನ 5 ದಿನ ದೇಶದ 20 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಎಚ್ಚರಿಕೆಯನ್ನು ನೀಡಿದೆ.

ದೇಶದ ಹಲವು ರಾಜ್ಯಗಳಲ್ಲಿ ಇಂದು ಭಾರಿ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅದೇ ಸಮಯದಲ್ಲಿ, ವಾಯುವ್ಯ ರಾಜ್ಯಗಳಲ್ಲಿ ಶಾಖದ ಅಲೆ ಮುಂದುವರಿಯುವ ನಿರೀಕ್ಷೆಯಿದೆ. ಮುಂದಿನ ಮೂರು ನಾಲ್ಕು ದಿನಗಳಲ್ಲಿ ಕೇರಳಕ್ಕೆ ಮಾನ್ಸೂನ್ ಆಗಮನಕ್ಕೆ ಪರಿಸ್ಥಿತಿಗಳು ಅನುಕೂಲಕರವಾಗುತ್ತವೆ ಎಂದು ಐಎಂಡಿ ತಿಳಿಸಿದೆ.

ಗೋವಾ, ಕರ್ನಾಟಕ, ಮಹಾರಾಷ್ಟ್ರ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳು, ಅರುಣಾಚಲ ಪ್ರದೇಶ ಅಸ್ಸಾಂ, ಮೇಘಾಲಯ, ಗುಜರಾತ್, ಕೇರಳ, ಲಕ್ಷದ್ವೀಪ ಮತ್ತು ಉತ್ತರಾಖಂಡಗಳಲ್ಲಿ ಶುಕ್ರವಾರ ಮತ್ತು ಶನಿವಾರ ಮಳೆಯಾಗುವ ಸಾಧ್ಯತೆಯಿದೆ. ಛತ್ತೀಸ್‌ಗಢ, ಪಶ್ಚಿಮ ಬಂಗಾಳ ಮತ್ತು ಜಾರ್ಖಂಡ್​ನಲಗಲಿ ಇಂದು ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಆದರೆ ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ಶುಕ್ರವಾರ ಅಪಾರ ಮಳೆ ಬೀಳುವ ಸಾಧ್ಯತೆ ಇದೆ ಎಂದು ಐಎಂಡಿ ಮಾಹಿತಿ ನೀಡಿದೆ.

(ಏಜೆನ್ಸೀಸ್)