ನ್ಯೂಸ್

ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ; ಮೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ರಾಜ್ಯದ ವಿವಿಧೆಡೆ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಮುಂದಿನ 4 ದಿನ ಮುಂದುವರಿಯಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದಲ್ಲಿ ಸೆ.6, 7ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಷಿಸಿದೆ.

ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ಉತ್ತರ ಒಳನಾಡಿನ ಬೀದರ್, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಬೆಳಗಾವಿ, ಕೊಪ್ಪಳ, ಗದಗ, ಧಾರವಾಡ ಮತ್ತು ಹಾವೇರಿಯಲ್ಲಿ ಮುಂದಿನ ಸೆ.6ರಿಂದ ಸೆ.8ರವರೆಗೆ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ.