ನ್ಯೂಸ್

ನ.5ರಿಂದ ರಾಜ್ಯದಲ್ಲಿ ಗುಡುಗು-ಮಿಂಚು ಸಹಿತ ಭಾರಿ ಮಳೆ

ಹರೀಶ್​​ ಕೆ.ಸಿ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಪರಿಣಾಮ ರಾಜ್ಯದಲ್ಲಿ ನವೆಂಬರ್ 5ರಿಂದ ಭರ್ಜರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಶಿವಮೊಗ್ಗ, ಕೊಡಗು ಚಿಕ್ಕಮಗಳೂರು ಹಾಗೂ ಹಾಸನದಲ್ಲಿ ನ.5ರಿಂದ ಮುಂದಿನ 2 ದಿನ ಗುಡುಗು- ಮಿಂಚು ಸಹಿತ ಭಾರಿ ಮಳೆಯಾಗಲಿದ್ದು, ಈ ಪ್ರದೇಶಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡದಲ್ಲಿ ನ.5ರಿಂದ ನ.7ರವರೆಗೆ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ. ರಾಜ್ಯದಲ್ಲಿ ಈಗಾಗಲೇ ಹಿಂಗಾರು ಮಳೆ ಆರಂಭವಾಗಿದ್ದು, ಡಿ.30ರವರೆಗೆ ಇರಲಿದೆ ಎಂದು ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ ಮಾಹಿತಿ ನೀಡಿದರು.