ರಾಜ್ಯದ 6 ಜಿಲ್ಲೆಗಳಲ್ಲಿ ಮಳೆ ಜೋರು  
ನ್ಯೂಸ್

ಜೋರು ಮಳೆ: 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ - Heavy rain

ಚಾಮರಾಜನಗರ, ಬೆಂ. ದಕ್ಷಿಣದಲ್ಲಿ ಮುಂದಿನ 2 ದಿನ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಮೈಸೂರಿನಲ್ಲಿ ಅ.24ರಂದು ಜೋರು ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ಬೆಂಗಳೂರು: (Yellow alert issued) ರಾಜ್ಯದ ಹಲವೆಡೆ ಶುಕ್ರವಾರವೂ ಗುಡುಗು ಸಹಿತ ವರುಣಾರ್ಭಟ ಮುಂದುವರಿದಿದೆ.

ಚಾಮರಾಜನಗರ, ಬೆಂ. ದಕ್ಷಿಣದಲ್ಲಿ ಮುಂದಿನ 2 ದಿನ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಮೈಸೂರಿನಲ್ಲಿ ಅ.24ರಂದು ಜೋರು ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಕೊಟ್ಟಿದೆ.

ಕರಾವಳಿ ಉದ್ದಕ್ಕೂ ಮತ್ತು ಹೊರಗಿನ ಪ್ರದೇಶಗಳಲ್ಲಿ ಗಂಟೆಗೆ 55 ಕಿಮೀ ವೇಗದಲ್ಲಿ ತೀವ್ರ ಬಿರುಗಾಳಿ ಬೀಸಲಿದ್ದು, ಈ ಅವಧಿಯಲ್ಲಿ ಸಮುದ್ರಕ್ಕೆ ಮೀನುಗಾರರು ಇಳಿಯದಂತೆ ಇಲಾಖೆ ಸೂಚಿಸಿದೆ.

ಬೆಂ.ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ ಮತ್ತು ತುಮಕೂರಿನಲ್ಲಿ ಅ.26ರಂದು ಸಾಧಾರಣ ಮಳೆಯಾಗಲಿದೆ.ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.

ಬೆಂಗಳೂರು ನಗರದಲ್ಲಿ ಮುಂದಿನ 3 ದಿನ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಲಿದೆ. ಗಂಟೆಗೆ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸಲಿದ್ದು, ಗುಡುಗು ಸಹಿತ ಸಾಧಾರಣ ಮಳೆ ಇರಲಿದೆ. ಗರಿಷ್ಠ,ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 21 ಡಿ.ಸೆ.ದಾಖಲಾಗಬಹುದು ಎಂದು ಇಲಾಖೆ ಮಾಹಿತಿ ಕೊಟ್ಟಿದೆ.