ನ್ಯೂಸ್

ಕೇರಳದಲ್ಲಿ ಭಾರೀ ಮಳೆ; ಎರಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ

ತಿರುವನಂತಪುರಂ: ಕೇರಳದ ಹಲವು ಭಾಗಗಳಲ್ಲಿ ಮಂಗಳವಾರ ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ದೇವರ ನಾಡಿನ ಎರಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಪತ್ತಿನಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಿಗೆ ಆರೆಂಟ್ ಘೋಷಿಸಿದೆ. ನಾನಾ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬುಧವಾರ ಎರ್ನಾಕುಲಂ ಮತ್ತು ಶ್ರೀಶೂರ್​ನಲ್ಲಿ ಗುರುವಾರ ಇಡುಕ್ಕಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆಯು ಪಥನಂತಿಟ್ಟ ಮತ್ತು ಕೊಲ್ಲಂ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಹಾಗೂ 40 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಕರಾವಳಿ ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚು ಜನರು ಹೆಚ್ಚಿನ ಜಾಗರೂಕರಾಗಿರಲು ಸೂಚಿಸಿದ್ದಾರೆ.