ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ಬುಧವಾರ ಮಳೆ ಆರಂಭಗೊಳ್ಳುವ ಮುನ್ನ ಮೋಡ ಕವಿದ ವಾತಾವರಣ ಕಂಡುಬಂದಿದ್ದು ಹೀಗೆ. 
ನ್ಯೂಸ್

ಕರ್ನಾಟಕದಾದ್ಯಂತ ಏಪ್ರಿಲ್ 2ರಿಂದ ಭಾರಿ ಮಳೆ! ಹವಾಮಾನ ಇಲಾಖೆ.. Rain Alert

Rain Alert : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ   ಏಪ್ರಿಲ್​ 2ರಿಂದ   ಕರ್ನಾಟಕ ಸೇರಿದಂತೆ ಅನೇಕ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಹಲವು ಭಾಗಗಳಿಗೆ ಎಚ್ಚರಿಕೆ ನೀಡಿದೆ.

ಕರ್ನಾಟಕದಾದ್ಯಂತ ಹಲವು ದಿನಗಳಿಂದ ಮಳೆಯಾಗುತ್ತಿದೆ. ಏಪ್ರಿಲ್​ 2ರಿಂದ ಮಳೆ ಜೋರಾಗಲಿದ್ದು, ಗುಡುಗು ಸಹಿತ ಮಳೆಯಾಗುವ ಸಂಭವವಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ,ಬೆಳಗಾವಿ, ಧಾರವಾಡ, ಗದಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಶಿವಮೊಗ್ಗ,ತುಮಕೂರು, ಮಂಡ್ಯ, ಕೋಲಾರ,ದಾವಣಗೆರೆ, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್​ನಲ್ಲಿ ಸಾಧಾರಣ ಮಳೆಯಾಗಲಿದೆ.

ದೇಶಾದ್ಯಂತ ಅನೇಕ ಪ್ರದೇಶಗಳಲ್ಲಿ ಬಿಸಿಲಿನ ಧಗೆ ಮುಂದುವರಿದರೆ, ಇನ್ನೂ ಕೆಲವು ರಾಜ್ಯಗಳಲ್ಲಿ ಮಳೆಯಿಂದಾಗಿ ತಂಪು ವಾತಾವರಣ ಇರಲಿದೆ.  ಪಾಶ್ಚಿಮಾತ್ಯ ವಾಯುಭಾರ ಕುಸಿತದಿಂದಾಗಿ ಅರುಣಾಚಲ ಪ್ರದೇಶ, ಉಪ-ಹಿಮಾಲಯನ್ ಪಶ್ಚಿಮ ಬಂಗಾಳ, ಸಿಕ್ಕಿಂನಂತಹ ಸ್ಥಳಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ.

ಕಳೆದ 24 ಗಂಟೆಗಳಲ್ಲಿ ಜಮ್ಮು ಮತ್ತು ಕಾಶ್ಮೀರ, ಲಡಾಖ್, ಉತ್ತರ ಪ್ರದೇಶ ಮತ್ತು ಪಂಜಾಬ್‌ನ ವಿವಿಧ ಸ್ಥಳಗಳಲ್ಲಿ ಬಲವಾದ ಗಾಳಿ ಬೀಸುತ್ತಿದೆ ಎಂದು ಭಾರತ ಹವಾಮಾನ ಇಲಾಖೆ  ತಿಳಿಸಿದೆ.