ನ್ಯೂಸ್

ಮುಂದಿನ 3 ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆ: ಹವಾಮಾನ ಇಲಾಖೆ...Heavy Rain

ಬೆಂಗಳೂರು:  ( Heavy Rain ) ಮುಂದಿನ 3 ದಿನಗಳಲ್ಲಿ ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಏಪ್ರಿಲ್​ 3ರಿಂದ ಮಳೆ ಶುರುವಾಗಲಿದ್ದು, ಬೆಂಗಳೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಜೋರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ,ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗಬಹುದು.