ಸಾಗರ: ಭಯೋತ್ಪಾದಕ ದಾಳಿ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಎಬಿವಿಪಿ ಪದಾಧಿಕಾರಿಗಳು ಗುರುವಾರ ಉಪ ವಿಭಾಗಾಧಿಕಾರಿ ಕಚೇರಿಗೆ ಮನವಿ ಸಲ್ಲಿಸಿದರು.
ಉಗ್ರರ ದಾಳಿ ಹೇಡಿತನದ್ದು. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗ. ಕಾಶ್ಮೀರದಲ್ಲಿ ಪದೇಪದೆ ಇಂತಹ ಕೃತ್ಯಗಳು ನಡೆಯುತ್ತಿದ್ದು, ಕೆಲವು ಪ್ರತ್ಯೇಕತಾವಾದಿಗಳು ಇದರ ಹಿಂದೆ ಇದ್ದಾರೆ ಎನ್ನುವ ಅನುಮಾನವಿದೆ. ಉಗ್ರ ಕೃತ್ಯವನ್ನು ಸಹಿಸಲು ಸಾಧ್ಯವಿಲ್ಲ. ದುಷ್ಕೃತ್ಯ ನಡೆಸಿದವರ ವಿರುದ್ಧ ಕೇಂದ್ರ ಸರ್ಕಾರ ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು. ಇಂತಹ ಸಂಕೀರ್ಣ ಕಾಲಘಟ್ಟದಲ್ಲಿ ಎಲ್ಲ ಪಕ್ಷಗಳು ಕೇಂದ್ರ ಸರ್ಕಾರಕ್ಕೆ ಬೆಂಬಲ ಸೂಚಿಸಿ, ಉಗ್ರವಾದವನ್ನು ಮಟ್ಟಹಾಕಲು ನೆರವಾಗಬೇಕು ಎಂದು ಒತ್ತಾಯಿಸಿದರು.
ಪ್ರಾಂತ್ಯ ಕಾರ್ಯದರ್ಶಿ ಎಚ್.ಕೆ.ಪ್ರವೀಣ್, ನಿತಿನ್‌ಕುಮಾರ್, ಮೋಹನ್, ಹರೀಶ್, ಭುವನ, ಸಂದೀಪ್, ಯಶಸ್ವಿನಿ, ಅಂಕಿತಾ, ಪ್ರಜ್ವಲ್, ಸಾಲ್ವಿನ್, ಪುನಿತ್ ಇತರರಿದ್ದರು.