ರಾಂಚಿ: ಜಾರ್ಖಂಡ್ದ 14ನೇ ಮುಖ್ಯಮಂತ್ರಿಯಾಗಿ ಜಾರ್ಖಂಡ್ ಮುಕ್ತಿ ಮೋರ್ಚಾ(JMM) ಪಕ್ಷದ ನಾಯಕ ಹೇಮಂತ್ ಸೊರೆನ್(Chief Minister) ಗುರುವಾರ ಪ್ರಮಾಣವಚನ ಸ್ವೀಕರಿಸಿದರು.
ಇನ್ನು ಅದ್ದೂರಿ ಕಾರ್ಯಕ್ರಮಕ್ಕೆ ಇಂಡಿಯಾ ಬಣದ ಪ್ರಮುಖ ನಾಯಕರು ಸಾಕ್ಷಿಯಾದರು. 49 ವರ್ಷದ ಬುಡಕಟ್ಟು ಜನಾಂಗದ ಸೊರೆನ್ಗೆ ರಾಜ್ಯಪಾಲ ಸಂತೋಷ್ ಕುಮಾರ್ ಗಂಗ್ವಾರ ಅವರು ಪ್ರತಿಜ್ಞಾವಿಧಿ ಭೋದಿಸಿದರು.
ರಾಂಜಿಯ ಮೊರಬಾದ್ನ ಮೈದಾನದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಕಾಂಗ್ರೆಸ್ನ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಮತ್ತು ಎಎಪಿ ನಾಯಕ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಆನೇಕ ನಾಯಕರು ಉಪಸ್ಥಿತಿ ಇದ್ದರು. ಪ್ರಮಾಣವಚನ ಸ್ವೀಕರಿಸುವ ಮೊದಲು ಸೊರೆನ್, ತಮ್ಮ ತಂದೆ ಶಿಬು ಸೊರೆನ್ ಅವರನ್ನು ಭೇಟಿಯಾದರು. ಜೆಎಂಎಂ ನಾಯಕ ಸೊರೆನ್ ಅವರು ನಾಲ್ಕನೇ ಬಾರಿ ಜಾರ್ಖಂಡ್ದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು.
ಇತ್ತೀಚಿಗೆ ನಡೆದ ಜಾರ್ಖಂಡ್ ವಿಧಾನಸಭೆಯ ಚುನಾವಣೆಯಲ್ಲಿ 81 ಕ್ಷೇತ್ರಗಳ ಪೈಕಿ ಜೆಎಂಎಂ ನೇತೃತ್ವದ ಮೈತ್ರಿಕೂಟ 56 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಎನ್ಡಿಯ ಮೈತ್ರಿಕೂಟ 24ರಲ್ಲಿ ಗೆದ್ದಿದೆ,(ಏಜೆನ್ಸೀಸ್).