ಅಹಮದಾಬಾದ್: ಭಾರತೀಯ ಕೋಸ್ಟ್ಗಾರ್ಡ್ ಸಿಬ್ಬಂದಿ ಹಾಗೂ ಭಯೋತ್ಪಾದನಾ ನಿಗ್ರಹ ದಳ ಜಂಟಿ ಕಾರ್ಯಾಚರಣೆ ಮೂಲಕ ಗುಜರಾತ್ನ ಕರಾವಳಿ ಭಾಗದಲ್ಲಿ ಪಾಕಿಸ್ತಾನದ ದೋಣಿಯಿಂದ 360 ಕೋಟಿ ರೂ. ಮೌಲ್ಯದ ಹೆರಾಯಿನ್ ವಶಪಡಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಾಕಿಸ್ತಾನ ಮೂಲದ ಅಲ್ ಸಕರ್ ಎಂಬ ಬೋಟ್ನಲ್ಲಿ 50 ಕೆ.ಜಿ ಹೆರಾಯಿನ್ ಸಾಗಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಲಭಿಸಿದ ಖಚಿತ ಮಾಹಿತಿ ಮೇರೆಗೆ ಕೋಸ್ಟ್ ಗಾರ್ಡ್ ಸಿಬ್ಬಂದಿ ದಾಳಿ ಮಾಡಿ ವಶಪಡಿಸಿಕೊಂಡಿದ್ದಾರೆ.
ದೋಣಿಯಲ್ಲಿದ್ದ 6 ಜನರನ್ನು ಬಂಧಿಸಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ. ಬೋಟ್ನ್ನು ರಾಜ್ಯದ ಬಂದರಿಗೆ ತರಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.