ನ್ಯೂಸ್

ಪ್ರಜ್ವಲ್ ರೇವಣ್ಣನಿಗೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿದ ಹೈಕೋರ್ಟ್

ಬೆಂಗಳೂರು: ಸಂಸದ ಸ್ಥಾನದಿಂದ ಅಸಿಂಧುಗೊಳಿಸಿರುವ ಆದೇಶಕ್ಕೆ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸುವಂತೆ ಸೂಚನೆ ನೀಡಿರುವ ಹೈಕೋರ್ಟ್ ವಿಚಾರಣೆಯನ್ನು ಸೆ.೮ಕ್ಕೆ ಮುಂದೂಡಿದೆ.
ಹಾಸನ ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದ ಪ್ರಜ್ವಲ್ ರೇವಣ್ಣ ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿ ಎ. ಮಂಜು ಮತ್ತು ವಕೀಲ ದೇವರಾಜೇ ಗೌಡ ಎಂಬುವರು ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ನಟರಾಜನ್ ಅವರ ನೇತೃತ್ವದ ಪೀಠ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ಪ್ರಜ್ವಲ್ ರೇವಣ್ಣರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶಿಸಿತ್ತು. ಈ ಆದೇಶವನ್ನು ಸುಪ್ರೀಂಕೋರ್ಟ್‌ಗೆ ಸಲ್ಲಿಕೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕಾಲಾವಕಾಶ ಅಗತ್ಯವಿದ್ದು, ಅಲ್ಲಿಯವರೆಗೂ ಈ ಹಿಂದೆ ನೀಡಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿ ಪ್ರಜ್ವಲ್ ರೇವಣ್ಣ ಮಧ್ಯಂತರ ಅರ್ಜಿ ಸಲ್ಲಿಸಿದ್ದರು.