ಸೊರಬ: ರಾಜ್ಯ ಸರ್ಕಾರ ಗ್ರಾಮೀಣ ಭಾಗದ ರಸ್ತೆಗಳ ಅಭಿವೃದ್ಧಿ ಸೇರಿ ಮೂಲ ಸೌಲಭ್ಯ ಕಲ್ಪಿಸಲು ಹೆಚ್ಚಿನ ಒತ್ತು ನೀಡುತ್ತಿದೆ ಎಂದು ತಾಪಂ ಮಾಜಿ ಅಧ್ಯಕ್ಷ ಎಚ್.ಗಣಪತಿ ಹುಲ್ತಿಕೊಪ್ಪ ಹೇಳಿದರು.
ಬಾಡದಬೈಲು ಗ್ರಾಮದ ರಸ್ತೆ ಕಾಮಗಾರಿ ಭೂಮಿಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲಾ ಉಸ್ತುವಾರಿ ಸಚಿವರು ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ. ಸ್ಥಳೀಯ ಸಮಸ್ಯೆಗಳ ಅರಿವು ಇರುವುದರಿಂದ ತಕ್ಷಣವೇ ಸ್ಪಂದಿಸುತ್ತಾರೆ ಎಂದರು.
ಗ್ರಾಮದಲ್ಲಿ ಮಾರಿ ಜಾತ್ರೆ ನಿಮಿತ್ತ ರಸ್ತೆ ಅಭಿವೃದ್ಧಿಗಾಗಿ ಸಚಿವರಲ್ಲಿ ಮನವಿ ಸಲ್ಲಿಸಿದ್ದರು. ಇದಕ್ಕೆ ಸಚಿವರು ತಕ್ಷಣವೇ ಸ್ಪಂದಿಸಿದ್ದಾರೆ. ಇದರಿಂದ ಗ್ರಾಮದ ಅಭಿವೃದ್ಧಿ ಜತೆಗೆ ಸುತ್ತಲಿನ ಗ್ರಾಮಗಳಿಗೂ ಅನುಕೂಲವಾಗಲಿದೆ. ಚಂದ್ರಗುತ್ತಿ ಸಮೀಪ ಬ್ಯಾರೇಜ್ ನಿರ್ಮಾಣದ ಬಗ್ಗೆ ಸಚಿವರು ಆಸಕ್ತಿ ವಹಿಸಿದ್ದು, ಇದರಿಂದ ಸುತ್ತಲಿನ ಗ್ರಾಮಗಳಿಗೆ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ತಿಳಿಸಿದರು.
ಗ್ರಾಪಂ ಉಪಾಧ್ಯಕ್ಷ ಎಂ.ಬಿ.ರೇಣುಕಾಪ್ರಸಾದ್, ಸದಸ್ಯ ಎಂ.ಪಿ.ರತ್ನಾಕರ, ತಿರುಪತಿ, ಗ್ರಾಪಂ ಮಾಜಿ ಉಪಾಧ್ಯಕ್ಷ ಪ್ರದೀಪ, ಮುಖಂಡರಾದ ಕುಮಾರನಾಯ್ಕ, ದ್ಯಾವಪ್ಪ, ಇಂದೂಧರ ಗೌಡ, ಚಂದ್ರಶೇಖರ ಗೌಡ, ದಾನಶೇಖರ ಗೌಡ, ಕುಮಾರ, ಮೋಹನ ಇತರರಿದ್ದರು.