ನ್ಯೂಸ್

ತೇಜಸ್ವಿನಿ ಗೌಡಗೆ 'ಹೈ' ರಿಲೀಫ್

Bengaluru - General - Pavithra Kundapur

ಬೆಂಗಳೂರು:  ಕಾಂಗ್ರೆಸ್ ಸರ್ಕಾರದ ವಿರುದ್ಧ 2023ರಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ ಬಿಜೆಪಿಯ ಮಾಜಿ ಮುಖಂಡರಾದ ತೇಜಸ್ವಿನಿ ಗೌಡ ವಿರುದ್ಧದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್‌ಐಆರ್ ಮತ್ತು ವಿಶೇಷ ನ್ಯಾಯಾಲಯದ ವಿಚಾರಣೆ ರದ್ದುಪಡಿಸುವಂತೆ ಕೋರಿ ತೇಜಸ್ವಿನಿ ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ಸೂರಜ್ ಗೋವಿಂದ ರಾಜ್ ಅವರ ಪೀಠ ಈ ಆದೇಶ ಮಾಡಿದೆ. ಅಲ್ಲದೆ, ಅರ್ಜಿಯಲ್ಲಿ ಪ್ರತಿವಾದಿಗಳಾಗಿರುವ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತ್ತು.