ಸಾಂದರ್ಭಿಕ ಚಿತ್ರ 
ನ್ಯೂಸ್

ವೇಗವಾಗಿ ಬಂದು ಬೈಕ್​ಗೆ ಗುದ್ದಿ, 20 ಅಡಿ ದೂರ ದ್ವಿಚಕ್ರ ವಾಹನ ಎಳೆದೊಯ್ದ ಕಾರು ಚಾಲಕ​..!

ಧರಣ್​ವಾಡ: ವೇಗವಾಗಿ ಬಂದ ಕಾರೊಂದು ಬೈಕ್‌ಗೆ ಡಿಕ್ಕಿ ಹೊಡೆದು ಬೈಕನ್ನು ಸುಮಾರು 20 ಅಡಿ ಎಳೆದುಕೊಂಡು ಹೋಗಿರುವ ಘಟನೆ ಮಧ್ಯಪ್ರದೇಶದ ಇಂದೋರ್​ ಸಮೀಪದ ಧರಣವಾಡ ಬಳಿ ನಡೆದಿದೆ.

ಇದನ್ನೂ ಓದಿ: ಅಂಗಡಿಗೆ ಹೋಗಿದ್ದ ಬಾಲಕನ ಮೇಲೆ ಬೀದಿನಾಯಿಗಳಿಂದ ಭಯಾನಕ ದಾಳಿ: ರಕ್ಷಣೆಗೆ ಧಾವಿಸಿದ ನೆರೆಹೊರೆಯವರು

ಅಪಘಾತದಲ್ಲಿ ಓರ್ವ ಬೈಕ್ ಸವಾರ ರಾಜು ಕಿರಾರ್ (35) ಸ್ಥಳದಲ್ಲೇ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ ಇಡೀ ಘಟನೆ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಕಾರು ಬೈಕ್‌ಗೆ ಡಿಕ್ಕಿ ಹೊಡೆಯುತ್ತಿರುವುದು ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ. ಇನ್ನು ಗಂಭೀರ ಗಾಯಗೊಂಡವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ:
ಫತೇಘರ್ ಪ್ರದೇಶದ ಚಕ್ ಚುರೇಲಾ ಗ್ರಾಮದ ನಿವಾಸಿ ರಾಜು ಕಿರಾರ್ ತನ್ನ ಕುಟುಂಬದೊಂದಿಗೆ ಸೋಮವಾರ ಬೆಳಿಗ್ಗೆ ದೇವಸ್ಥಾನಕ್ಕೆ ಹೋಗುತ್ತಿದ್ದನು. ಈ ವೇಳೆ ಬೈಕ್​ನಲ್ಲಿ 4 ಜನ ಕುಳಿತಿದ್ದರು. ಬೆಳಗ್ಗೆ 8:30ರ ಸುಮಾರಿಗೆ ರಾಷ್ಟ್ರೀಯ ಹೆದ್ದಾರಿ 46ರಲ್ಲಿ ಗಾದರ್ ಮಂದಿರ ಕಡೆಗೆ ಬೈಕ್ ತಿರುವು ಪಡೆದ ತಕ್ಷಣ ಇಂದೋರ್ ಕಡೆಯಿಂದ ವೇಗವಾಗಿ ಬಂದ ಕಾರು ಇವರ ಬೈಕ್‌ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ: ಕ್ರಿಕೆಟ್ ಆಡುತ್ತಿದ್ದಾಗ ಇದ್ದಕ್ಕಿದ್ದಂತೆಯೇ ಕುಸಿದು ಬಿದ್ದ ಯುವಕ: ಮುಂದೆ ನಡೆದಿದ್ದಿಷ್ಟು..

ಕಾರಿನ ವೇಗ ಹೆಚ್ಚಾಗಿದ್ದು, ಡಿಕ್ಕಿಯ ರಭಸಕ್ಕೆ ಕಾರು ಬೈಕ್​ನ್ನು ಸುಮಾರು 20 ಅಡಿಗೂ ಹೆಚ್ಚು ಎಳೆದೊಯ್ದಿದೆ. ಪರಿಣಾಮವಾಗಿ ಬೈಕ್ ಸವಾರ ರಾಜು ಕಿರಾರ್ (35) ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಮಾಹಿತಿ ಪಡೆದ ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು, ಕಾರು ಚಾಲಕನ ವಿರುದ್ಧ ನಿರ್ದಾಕ್ಷಿಣ್ಯ ನರಹತ್ಯೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಧರ್ಣವಾಡ ಪೊಲೀಸ್ ಠಾಣೆ ಪ್ರಭಾರಿ ರಾಜೇಂದ್ರ ಚೌಹಾಣ್ ತಿಳಿಸಿದ್ದಾರೆ. ಕಾರನ್ನು ಸಹ ವಶಪಡಿಸಿಕೊಳ್ಳಲಾಗಿದ್ದು, ಪೊಲೀಸ್​ ಇಲಾಖೆಯ ನೌಕರನೊಬ್ಬ ಕಾರು ಚಲಾಯಿಸುತ್ತಿದ್ದ ಎಂಬ ಆರೋಪವೂ ಕೇಳಿ ಬಂದಿದೆ.(ಏಜೆನ್ಸೀಸ್​)