ನವದೆಹಲಿ: ಭಾರತದಲ್ಲಿ ಇಂದು ಒಂದೇ ದಿನ ಬರೋಬ್ಬರಿ 28,701 ಕೊವಿಡ್-19 ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 8,78,254ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 500 ಮಂದಿ ಕೊವಿಡ್ನಿಂದ ಮೃತಪಟ್ಟಿದ್ದಾರೆ.
ದೇಶದಲ್ಲಿ ಸಾವಿನ ಸಂಖ್ಯೆ 23, 174ಕ್ಕೆ ಏರಿದ್ದು, 5,53,471 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 3,01,609 ಸಕ್ರಿಯ ಕರೊನಾ ಪ್ರಕರಣಗಳು ಇವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಮಹಾರಾಷ್ಟ್ರದಲ್ಲಿ ಕರೊನಾ ಓಟ ಮುಂದುವರಿದಿದೆ. ಅಲ್ಲಿ ಒಟ್ಟು 2, 60,924 ಸೋಂಕಿತರು ಇದ್ದಾರೆ. ತಮಿಳುನಾಡಿನ ಕರೊನಾ ಸೋಂಕಿತರ ಸಂಖ್ಯೆ 1, 42, 798 ಮತ್ತು ದೆಹಲಿಯ ಸಂಖ್ಯೆ 1,13,740ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ನಾಳಿನ ಸಿಎಲ್ಪಿ ಸಭೆಗೆ ದಯವಿಟ್ಟು ಬನ್ನಿ..: ಸಚಿನ್ ಪೈಲಟ್ಗೆ ಲಿಖಿತ ಮನವಿ ಕಳಿಸಿದ ಕಾಂಗ್ರೆಸ್
ಇನ್ನು ದೇಶದಲ್ಲಿ ಕರೊನಾದಿಂದ ಚೇತರಿಸಿಕೊಳ್ಳುತ್ತಿರುವವರ ಪ್ರಮಾಣ ಶೇ.63ರಷ್ಟಿದೆ. ಸಾವಿನ ಪ್ರಮಾಣ ಶೇ.2.64ರಷ್ಟಿದೆ. ಎಲ್ಲ ರಾಜ್ಯಗಳಲ್ಲೂ ಕರೊನಾ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಹಾಗೇ ಕಳೆದ 24 ಗಂಟೆಯಲ್ಲಿ 2, 19,103 ಜನರ ಗಂಟಲು ದ್ರವದ ಮಾದರಿಯನ್ನು ಕರೊನಾ ತಪಾಸಣೆಗೆ ಒಳಪಡಿಸಲಾಗಿತ್ತು ಎಂದೂ ತಿಳಿಸಿದೆ. (ಏಜೆನ್ಸೀಸ್)