ನವದೆಹಲಿ: ವಿಶ್ವದಲ್ಲಿ ಹಾವು ಕಡಿತದಿಂದ ಸಾಯುವವರ ಪಟ್ಟಿಯಲ್ಲಿ ಭಾರತ ಅಗ್ರಸ್ಥಾನದಲ್ಲಿದೆ ಎಂದು ಬಿಜೆಪಿ ಸಂಸದ ರಾಜೀವ್ ಪ್ರತಾಪ್ ರೂಡಿ ತಿಳಿಸಿದರು.
ಭಾರತದಲ್ಲಿ ಪ್ರತಿ ವರ್ಷ 30 ರಿಂದ 40 ಲಕ್ಷ ಜನರು ಹಾವು ಕಡಿತಕ್ಕೆ ಒಳಗಾಗುತ್ತಿದ್ದು, ದೇಶದಲ್ಲಿ ಹಾವು ಕಡಿತದಿಂದ ಪ್ರತಿ ವರ್ಷ 50 ಸಾವಿರ ಜನರು ಮೃತಪಡುತ್ತಿದ್ದಾರೆ ಎಂದು ಸೋಮವಾರ ಲೋಕಸಭೆಯಲ್ಲಿ ಹೇಳಿದ್ದಾರೆ.
ಎಲ್ಲ ರಾಜ್ಯಗಳಲ್ಲೂ ಹಾವು ಕಡಿತಕ್ಕೆ ಸೂಕ್ತ ಚಿಕಿತ್ಸೆ ನೀಡಬೇಕಿದೆ. ಗ್ರಾಮಾಂತರ ಪ್ರದೇಶದಲ್ಲೂ ಹಾವು ಕಡಿತಕ್ಕೆ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕಿದೆ ಎಂದರು.
ಬಿಹಾರ ಅತ್ಯಂತ ಬಡ ರಾಜ್ಯವಾಗಿದೆ. ಇದರ ಜತೆಗೆ ಈ ರಾಜ್ಯದಲ್ಲಿ ಹವಾಮಾನ ಬದಲಾವಣೆಯೂ ದುಷ್ಪರಿಣಾಮ ಬೀರುತ್ತಿದೆ. ಇದು ಕಳವಳಕಾರಿ ಸಂಗತಿ ಎಂದು ತಿಳಿಸಿದರು.