ಹಾಲು ಹಾಗೂ ಹಾಲಿನ ಉತ್ಪನ್ನಗಳ ದರ ಏರಿಕೆ ಹಿಂಪಡೆಯಬೇಕು ಎಂದು ಒತ್ತಾಯಿಸಿ ತಾಲೂಕು ಜೆಡಿಎಸ್ ಮುಖಂಡರು ರಿಪ್ಪನ್‌ಪೇಟೆ ನಾಡಕಚೇರಿಗೆ ಮನವಿ ಸಲ್ಲಿಸಿದರು. ಎನ್.ವರ್ತೇಶ್, ವರದರಾಜ್, ಹರೀಶ್, ಚಾಬುಸಾಬ್ ಇತರರಿದ್ದರು.  
ನ್ಯೂಸ್

ಹಾಲಿನ ದರ ಏರಿಕೆ ಅವೈಜ್ಞಾನಿಕ

ತಾಲೂಕು ಜೆಡಿಎಸ್‌ನಿಂದ ಪ್ರತಿಭಟನೆ

ರಿಪ್ಪನ್‌ಪೇಟೆ: ರಾಜ್ಯದಲ್ಲಿ ದಿನೇದಿನೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಆಗುತ್ತಿರುವುದರಿಂದ ಜನಸಾಮಾನ್ಯರು, ರೈತರು ಹಾಗೂ ಮಧ್ಯಮ ವರ್ಗದ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುವಂತಾಗಿದೆ. ಹಾಲು, ಮೊಸರು, ಹಾಲಿನ ಉತ್ಪನ್ನಗಳ ಬೆಲೆ ಏರಿಕೆ ಹಾಗೂ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳವನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ ಹೊಸನಗರ ತಾಲೂಕು ಜೆಡಿಎಸ್ ಪ್ರಮುಖರು ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.

ಹಾಲು ಮತ್ತು ಉತ್ಪನ್ನಗಳ ದರವನ್ನು 8ರಿಂದ 25 ರೂ.ವರೆಗೆ ಹೆಚ್ಚಿಸಿರುವುದನ್ನು ತಕ್ಷಣ ಹಿಂಪಡೆಯಬೇಕು. ಕೆಎಸ್‌ಆರ್‌ಟಿಸಿ ಸೇರಿ ಇತರ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರ ಹೆಚ್ಚಳವನ್ನು ವಾಪಸ್ ಪಡೆಯಬೇಕು. ಬರಪೀಡಿತ ರೈತರು, ಗ್ರಾಮೀಣ ಕುಟುಂಬಗಳು ಹಾಗೂ ಜನಸಾಮಾನ್ಯರಿಗೆ ವಿಶೇಷ ಪರಿಹಾರ ಘೋಷಿಸಬೇಕು. ಬರಪೀಡಿತ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರು ಒದಗಿಸಬೇಕು. ಅಕ್ಕಿ, ಸಕ್ಕರೆ, ಬೇಳೆ ಕಾಳುಗಳು ಹಾಗೂ ದಿನಬಳಕೆ ವಸ್ತುಗಳ ಬೆಲೆ ನಿಯಂತ್ರಣ ಮಾಡಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಜನಸಾಮಾನ್ಯರ ಸಂಕಷ್ಟವನ್ನು ಗಂಭೀರವಾಗಿ ಪರಿಗಣಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಜನರ ಜೀವನ ನಿರ್ವಹಣೆಗೆ ಅನುಕೂಲವಾಗುವಂತೆ ತಕ್ಷಣ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಹೊಸನಗರ ತಾಲೂಕು ಜೆಡಿಎಸ್ ಅಧ್ಯಕ್ಷ ಎನ್.ವರ್ತೇಶ್, ಜಿಲ್ಲಾ ಉಪಾಧ್ಯಕ್ಷ ವರದರಾಜ್, ಮುಖಂಡರಾದ ಚಾಬುಸಾಬ್, ಹರೀಶ್, ಮಲ್ಲೇಶ್, ನಟರಾಜ್ ಇತರರಿದ್ದರು.