ಬೆಂಗಳೂರು: ಸೌಜನ್ಯಾ ಅತ್ಯಾಚಾರ ಪ್ರಕರಣದಲ್ಲಿ ನಿಜವಾದ ಆರೋಪಿಗಳಿಗೆ ಶಿಕ್ಷೆಯಾಗಬೇಕು. ಆದರೆ ಪ್ರಕರಣದ ನೆಪದಲ್ಲಿ ಶೀಕೇತ್ರ ಧರ್ಮಸ್ಥಳದ ತೇಜೋವಧೆ ನಡೆಯುತ್ತಿರುವುದು ಖಂಡನೀಯ ಎಂದು ಹಿಂದು ಜನಜಾಗೃತಿ ಸಮಿತಿ ಹೇಳಿದೆ.
ಕೇಂದ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಸೌಜನ್ಯಾ ಪ್ರಕರಣದಲ್ಲಿ ಆರೋಪಿ ಸಂತೋಷ್ ರಾವ್ನ್ನು ನಿದೋರ್ಷಿ ಎಂದು ಘೋಷಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ 11 ವರ್ಷ ಕಳೆದರೂ ನಿಜವಾದ ಆರೋಪಿಗಳ ಬಂಧನ ಆಗದಿರುವುದು ಕಾನೂನು ಸುವ್ಯವಸ್ಥೆ ವಿಫಲವಾಗಿರುವುದರ ಲಕ್ಷಣ.
ಪ್ರಕರಣದ ಮರು ತನಿಖೆ ಆಗಬೇಕು ಎಂದು ಎಂಬ ಕೂಗು ಮತ್ತೆ ಕೇಳಿ ಬರುತ್ತಿದೆ. ಆದರೆ ಈ ಪ್ರಕರಣವನ್ನು ನೆಪವಾಗಿಟ್ಟುಕೊಂಡು ಕೆಲ ಸಂಟನೆ ಮತ್ತು ಜನರು ಶೀ ಕೇತ್ರ ಧರ್ಮಸ್ಥಳದ ತೇಜೋವಧೆಗೆ ಪ್ರಯತ್ನಿಸುತ್ತಿರುವುದು ಖಂಡನೀಯ. ರಾಜ್ಯದಲ್ಲಿ 2019 ರಿಂದ 2021ರ ಅವಧಿಯಲ್ಲಿ 40,000 ಬಾಲಕಿಯರು, ಮಹಿಳೆಯರು ನಾಪತ್ತೆಯಾಗಿದ್ದಾರೆ. ಈವರೆಗೆ ಈ ಪ್ರಕರಣಗಳ ತನಿಖೆ ಯಾಕೆ ಮಾಡಿಲ್ಲ? ಧರ್ಮಸ್ಥಳದ ಬಗ್ಗೆ ಮಾತನಾಡುವ ಹಿಂದುಯೇತರರು ಈ ಎಲ್ಲ ಪ್ರಕರಣಗಳ ಬಗ್ಗೆ ಯಾಕೆ ಮೌನ? ಟನೆಗಳನ್ನು ಗಮನಿಸಿದಾಗ ಸೌಜನ್ಯಾ ಪ್ರಕರಣವನ್ನು ನೆಪಮಾಡಿಕೊಂಡು ಹಿಂದು ವಿರೋಧಿಗಳು ಧರ್ಮಸ್ಥಳವನ್ನು ಗುರಿ ಮಾಡುತ್ತಿರುವುದು ಗಮನಕ್ಕೆ ಬರುತ್ತದೆ ಎಂದು ಹಿಂದು ಜನಜಾಗೃತಿ ಸಮಿತಿ ತಿಳಿಸಿದೆ.