ನ್ಯೂಸ್

ಹೊಂಬಾಳೆ ಫಿಲಂಸ್​ ಮೂಲಕವೇ ಕರ್ನಾಟಕದಲ್ಲಿ ಬಿಡುಗಡೆಯಾಗಲಿದೆ ಸಲಾರ್

ಬೆಂಗಳೂರು: ಯಂಗ್​ ರೆಬೆಲ್​​ ಸ್ಟಾರ್​ ಪ್ರಭಾಸ್ ಅಭಿನಯದ, ಪ್ರಶಾಂತ್​ ನೀಲ್​ ನಿರ್ದೇಶನದ ಬಹುನಿರೀಕ್ಷಿತ ಚಿತ್ರ ಸಲಾರ್​ ಸಿನಿಮಾದ ಹೊಸ ಅಪ್ಡೇಟ್​ ಒಂದು ಹೊರಬಿದ್ದಿದ್ದು, ಡಾರ್ಲಿಂಗ್ ಅಭಿಮಾನಿಗಳ ಕುತೂಹಲವನ್ನು ಮತ್ತಷ್ಟು ಹೆಚ್ಚಿಸಿದೆ.

ಕೆ.ಜಿ.ಎಫ್, ಕಾಂತಾರದಂತಹ ವಿಶ್ವಪ್ರಸಿದ್ಧ ಚಿತ್ರಗಳನ್ನು ನಿರ್ಮಿಸಿರುವ ಹೊಂಬಾಳೆ ಫಿಲಂಸ್ ನಿರ್ಮಾಣದ ಮತ್ತೊಂದು ಬಹು ನಿರೀಕ್ಷಿತ ಚಿತ್ರ ಸಲಾರ್ ವಿತರಣೆಯನ್ನು ಕರ್ನಾಟಕದಲ್ಲಿ ಸ್ವತಃ ಸಂಸ್ಥೆಯೇ ಮಾಡಲಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಕರುನಾಡಿನಾದ್ಯಂತ ವಿತರಣೆಯ ಹೊಣೆ ನಮ್ಮದು. ಅತ್ಯಮೋಘ ಅನುಭನ ನೀಡುವ ಭರವಸೆಯೊಂದಿಗೆ ನಿಮ್ಮ ಮುಂದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿದೆ. ಹೊಂಬಾಳೆ ಫಿಲಂಸ್ ಈವರೆಗೂ ನಿರ್ಮಿಸಿರುವ ಎಲ್ಲಾ ಚಿತ್ರಗಳು ಹೊಂಬಾಳೆ ಫಿಲಂಸ್ ಸಂಸ್ಥೆ ಕರ್ನಾಟಕದಲ್ಲಿ ವಿತರಣೆ ಮಾಡಿದೆ . ಬಹು ನಿರೀಕ್ಷಿತ ಸಲಾರ್ ಚಿತ್ರವನ್ನು ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಸಂಸ್ಥೆ ವಿತರಣೆ ಮಾಡಲಿದೆ.

ವಿಜಯ ಕಿರಗಂದೂರ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಖ್ಯಾತ ನಟ ಪ್ರಭಾಸ್ ನಾಯಕರಾಗಿ ನಟಿಸಿರುವ ಸಲಾರ್ ಚಿತ್ರ ಡಿಸೆಂಬರ್ 22 ರಂದು ವಿಶ್ವದಾದ್ಯಂತ ತೆರೆಕಾಣಲಿದೆ.