Horoscope 2025 : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಜೋತಿಷ್ಯದ ಮೊರೆ ಹೋಗುತ್ತಾರೆ. ಏಕೆಂದರೆ, ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ ಸ್ಥಾನ ಭವಿಷ್ಯದ ಜೀವನವನ್ನು ನಿರ್ಧರಿಸುತ್ತದೆ. ಅಲ್ಲದೆ, ಧನಾತ್ಮಕ ಹಾಗೂ ಋಣಾತ್ಮಕ ಅಂಶಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.
ನಾವೀಗ ವರ್ಷದ ಕೊನೆಯ ತಿಂಗಳಿಗೆ ಪ್ರವೇಶ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ 2024 ಮುಗಿದು 2025ರ ಹೊಸ ವರ್ಷ ಬರಲಿದೆ. ಹೊಸ ವರ್ಷದಲ್ಲಿ ತಮ್ಮ ಅದೃಷ್ಟ ಬದಲಾಗುತ್ತಾ ಎಂದು ಯೋಚನೆ ಮಾಡುವವರು ಕೂಡ ಇದಾರೆ. ಅದಕ್ಕಾಗಿ ತಮ್ಮ ರಾಶಿಭವಿಷ್ಯ ತಿಳಿದುಕೊಳ್ಳಲು ತೀವ್ರ ಕುತೂಹಲವನ್ನು ಹೊಂದಿರುತ್ತಾರೆ.
ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳಲ್ಲಿನ ಅಸಮತೋಲನದಿಂದ ಎರಡು ಗ್ರಹಗಳು ಒಟ್ಟಿಗೆ ಸೇರಿದಾಗ ಕೆಲವು ಯೋಗಗಳು ರೂಪುಗೊಳ್ಳುತ್ತವೆ ಎಂದು ನಂಬಲಾಗಿದೆ. ಈ ರೀತಿಯಾಗಿ ರೂಪುಗೊಳ್ಳುವ ಅಪರೂಪದ ಯೋಗಗಳ ಪ್ರಭಾವವು ಎಲ್ಲ 12 ರಾಶಿಗಳ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬೀರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.
2025ರ ಹೊಸ ವರ್ಷದಲ್ಲಿ ಗ್ರಹಗಳ ಸಂಕ್ರಮಣದ ಮುನ್ಸೂಚನೆಯ ಪ್ರಕಾರ, ಗುರು ಮತ್ತು ಚಂದ್ರನ ಸಂಯೋಗವು ಗಜಕೇಸರಿ ಯೋಗವನ್ನು ಉಂಟುಮಾಡಲಿದೆ. ಈ ಗಜಕೇಸರಿ ಯೋಗವು 2025ರಲ್ಲಿ ಕೆಲವು ರಾಶಿಚಕ್ರ ಚಿಹ್ನೆಗಳಿಗೆ ಅದೃಷ್ಟವನ್ನು ತರಲಿದ್ದು, ಆರ್ಥಿಕವಾಗಿ ಮುಂದುವರಿಯುವ ಅವಕಾಶವನ್ನು ಒದಗಿಸಲಿದೆ. ಆ ರಾಶಿಗಳು ಯಾವುವು ಎಂಬುದನ್ನು ನಾವೀಗ ತಿಳಿಯೋಣ.
2025ರಲ್ಲಿ ಎರಡು ಪ್ರಬಲ ಗ್ರಹಗಳ ಸಂಯೋಗದಿಂದ ರೂಪುಗೊಳ್ಳುವ ಗಜಕೇಸರಿ ಯೋಗವು ಮಿಥುನ ರಾಶಿಯವರ ಜೀವನದಲ್ಲಿ ಪ್ರಮುಖ ಬದಲಾವಣೆಯನ್ನು ತರಲಿದೆ. ವೃತ್ತಿ ಮತ್ತು ವೈಯಕ್ತಿಕ ಜೀವನದ ವಿಷಯದಲ್ಲಿ ಅವರಿಗೆ ಉತ್ತಮ ಪ್ರಯೋಜನಗಳು ಸಿಗಲಿವೆ. ಈ ಅವಧಿಯಲ್ಲಿ ಹೊಸ ಉದ್ಯಮಗಳನ್ನು ಪ್ರಾರಂಭಿಸಲು ಅವಕಾಶವಿರುತ್ತದೆ. ಆಲೋಚನೆ ಮತ್ತು ಬುದ್ಧಿವಂತಿಕೆಯಲ್ಲಿ ಹೊಸ ಉತ್ಸಾಹ ಇರುತ್ತದೆ. ಇವರು ಮುಟ್ಟಿದ್ದೆಲ್ಲಾ ಚಿನ್ನವಾಗುತ್ತದೆ. ಆರ್ಥಿಕ ಸ್ಥಿತಿಯಲ್ಲಿ ಹಿಂದೆಂದೂ ಕಾಣದ ಬೆಳವಣಿಗೆ ಕಂಡುಬರಲಿದೆ.
ಕನ್ಯಾ ರಾಶಿಯಲ್ಲಿ ಜನಿಸಿದವರಿಗೆ ಗಜಕೇಸರಿ ಯೋಗವು ಆರ್ಥಿಕ ಸ್ಥಿರತೆ ಮತ್ತು ವೃತ್ತಿ ಬೆಳವಣಿಗೆಯನ್ನು ತರುತ್ತದೆ. ಹೊಸ ಪ್ರಯತ್ನಗಳು ನಿರೀಕ್ಷಿತ ಯಶಸ್ಸನ್ನು ನೀಡುತ್ತವೆ. ಅಲ್ಲದೆ, ನಿಮ್ಮ ದೈಹಿಕ ಆರೋಗ್ಯವು ಕಠಿಣ ಪರಿಶ್ರಮದಿಂದ ಏನನ್ನಾದರೂ ಸಾಧಿಸುವಷ್ಟು ಸ್ಥಿರವಾಗಿರುತ್ತದೆ. ವೃತ್ತಿಪರ ಮತ್ತು ವೈಯಕ್ತಿಕ ಜೀವನ ಎರಡೂ ಆನಂದದಾಯಕವಾಗಿರುತ್ತದೆ. ಮುಂಬರುವ ವರ್ಷದ ಆರಂಭದಿಂದ ಹಣದ ಕೊರತೆ ಇರುವುದಿಲ್ಲ.
2025ರಲ್ಲಿ ಗಜಕೇಸರಿ ಯೋಗದಿಂದಾಗಿ ಧನುಸ್ಸು ರಾಶಿಯ ಜನರು ತಮ್ಮ ಗುರಿಗಳ ಮೇಲೆ ಕೇಂದ್ರೀಕರಿಸಲು ಪ್ರಾರಂಭಿಸುತ್ತಾರೆ. ಗುರಿಗಳಲ್ಲಿ ಸ್ಪಷ್ಟತೆಯನ್ನು ಪಡೆಯಲು ಮತ್ತು ಹೊಸ ಉದ್ದೇಶವನ್ನು ಅಳವಡಿಸಿಕೊಳ್ಳಲು ಅವಕಾಶವಿದೆ. ಹಣಕಾಸಿನ ಪರಿಸ್ಥಿತಿಯಲ್ಲಿ ಗಮನಾರ್ಹ ಬೆಳವಣಿಗೆಯ ಜತೆಗೆ ಮನೆ ಮತ್ತು ವಾಹನ ಖರೀದಿಸಲು ಅವಕಾಶವಿರುತ್ತದೆ. ಸ್ನೇಹಿತರು ಮತ್ತು ಸಂಬಂಧಿಕರಿಂದ ಅನಿರೀಕ್ಷಿತ ಹಣಕಾಸಿನ ನೆರವು ಸಿಗುವ ಸಾಧ್ಯತೆ ಇದೆ.
ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ ವಿಜಯವಾಣಿ ಡಾಟ್ ನೆಟ್ ಸೈಟ್ ಜವಾಬ್ದಾರರಾಗಿರುವುದಿಲ್ಲ.