ನ್ಯೂಸ್

12 ವರ್ಷದ ಬಳಿಕ ಲಕ್ಷ್ಮೀ ನಾರಾಯಣ ರಾಜಯೋಗ: ಈ 3 ರಾಶಿಯವರಿಗೆ 2025ರಲ್ಲಿ ಅದೃಷ್ಟವೋ ಅದೃಷ್ಟ! Horoscope 2025

Horoscope 2025 : ಸಾಮಾನ್ಯವಾಗಿ ನಮ್ಮ ನಡುವೆ ಜಾತಕವನ್ನು ನಂಬುವಂತಹ ಅನೇಕ ಜನರಿದ್ದಾರೆ. ಅದೇ ರೀತಿ ನಂಬದವರು ಕೂಡ ಇದ್ದಾರೆ. ಪ್ರತಿಯೊಂದು ಕೆಲಸ, ಕಾರ್ಯಗಳನ್ನು ಮಾಡಬೇಕಾದರೂ ಜೋತಿಷ್ಯದ ಮೊರೆ ಹೋಗುತ್ತಾರೆ. ಏಕೆಂದರೆ, ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ದಿನಾಂಕ, ರಾಶಿ, ನಕ್ಷತ್ರ ಹಾಗೂ ಗ್ರಹಗಳ ಸ್ಥಾನ ಭವಿಷ್ಯದ ಜೀವನವನ್ನು ನಿರ್ಧರಿಸುತ್ತದೆ. ಅಲ್ಲದೆ, ಧನಾತ್ಮಕ ಹಾಗೂ ಋಣಾತ್ಮಕ ಅಂಶಗಳ ಮೇಲೆ ಪ್ರಭಾವ ಬೀರುತ್ತದೆ ಎಂದು ನಂಬಲಾಗಿದೆ.

ನಾವೀಗ ವರ್ಷದ ಕೊನೆಯ ತಿಂಗಳಿಗೆ ಪ್ರವೇಶ ಮಾಡಿದ್ದೇವೆ. ಇನ್ನು ಕೆಲವೇ ದಿನಗಳಲ್ಲಿ 2024 ಮುಗಿದು 2025ರ ಹೊಸ ವರ್ಷ ಬರಲಿದೆ. ಹೊಸ ವರ್ಷದಲ್ಲಿ ತಮ್ಮ ಅದೃಷ್ಟ ಬದಲಾಗುತ್ತಾ ಎಂದು ಯೋಚನೆ ಮಾಡುವವರು ಕೂಡ ಇದಾರೆ. ಅದಕ್ಕಾಗಿ ತಮ್ಮ ರಾಶಿಭವಿಷ್ಯ ತಿಳಿದುಕೊಳ್ಳಲು ತೀವ್ರ ಕುತೂಹಲವನ್ನು ಹೊಂದಿರುತ್ತಾರೆ.

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನಗಳಲ್ಲಿನ ಅಸಮತೋಲನದಿಂದ ಎರಡು ಗ್ರಹಗಳು ಒಟ್ಟಿಗೆ ಸೇರಿದಾಗ ಕೆಲವು ಯೋಗಗಳು ರೂಪುಗೊಳ್ಳುತ್ತವೆ ಎಂದು ನಂಬಲಾಗಿದೆ. ಈ ರೀತಿಯಾಗಿ ರೂಪುಗೊಳ್ಳುವ ಅಪರೂಪದ ಯೋಗಗಳ ಪ್ರಭಾವವು ಎಲ್ಲ 12 ರಾಶಿಗಳ ಮೇಲೆ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳನ್ನು ಬೀರುತ್ತದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ.

ಆ ನಿಟ್ಟಿನಲ್ಲಿ 2025ರ ಜಾತಕ ಭವಿಷ್ಯವನ್ನು ಆಧರಿಸಿ, ಬರೋಬ್ಬರಿ 12 ವರ್ಷಗಳ ನಂತರ, ಬುಧ ಮತ್ತು ಶುಕ್ರ ಗ್ರಹ ಮೀನ ರಾಶಿಯಲ್ಲಿ ಒಟ್ಟಿಗೆ ಸೇರಲಿದ್ದಾರೆ. ಇದರಿಂದ 12 ವರ್ಷದ ಬಳಿಕ ಲಕ್ಷ್ಮೀ ನಾರಾಯಣ ರಾಜಯೋಗ ರೂಪುಗೊಳ್ಳುತ್ತಿದೆ. ಇದರ ಪರಿಣಾಮವಾಗಿ ಕೆಲವು ದ್ವಾದಸ ರಾಶಿಗಳು 2025ರಲ್ಲಿ ಆರ್ಥಿಕ ಬೆಳವಣಿಗೆಯನ್ನು ಅನುಭವಿಸಲಿವೆ. ಆ ರಾಶಿಗಳು ಯಾವುವು ಎಂಬುದನ್ನು ನಾವೀಗ ತಿಳಿಯೋಣ.

ಮೀನ ರಾಶಿ

2025ರಲ್ಲಿ ರೂಪುಗೊಳ್ಳುವ ಲಕ್ಷ್ಮೀ ನಾರಾಯಣ ರಾಜಯೋಗವು ಮೀನ ರಾಶಿಯವರಿಗೆ ಹೆಚ್ಚಿನ ಸಮೃದ್ಧಿಯನ್ನು ತರುತ್ತದೆ. ಈ ರಾಶಿಯ ಜನರು ತಮ್ಮ ವೃತ್ತಿಪರ ವಿಷಯಗಳಲ್ಲಿ ನಿರೀಕ್ಷೆಗಿಂತ ಹೆಚ್ಚಿನ ಪ್ರಗತಿಯನ್ನು ಕಾಣುತ್ತಾರೆ. ಹೊಸ ವ್ಯವಹಾರವನ್ನು ಪ್ರಾರಂಭಿಸುವ ಪ್ರಯತ್ನಗಳು ಯಶಸ್ವಿಯಾಗುತ್ತವೆ. ದೈಹಿಕ ವ್ಯಾಯಾಮದಲ್ಲಿ ತೊಡಗಿರುವವರಿಗೆ ಹೆಚ್ಚಿನ ಲಾಭ ತರುತ್ತದೆ ಮತ್ತು ಕೆಲಸದಲ್ಲಿ ನಿಮ್ಮಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ಬಡ್ತಿ ಮತ್ತು ವೇತನ ಹೆಚ್ಚಳದ ಹೆಚ್ಚಿನ ಅವಕಾಶಗಳಿವೆ.

ಕುಂಭ ರಾಶಿ

ಕುಂಭ ರಾಶಿಯವರಿಗೆ ಲಕ್ಷ್ಮೀ ನಾರಾಯಣ ರಾಜಯೋಗವು ಅವರ ಜೀವನದಲ್ಲಿ ವಿವಿಧ ರೀತಿಯಲ್ಲಿ ಧನಾತ್ಮಕ ಬದಲಾವಣೆಗಳನ್ನು ತರುತ್ತದೆ. ಬುದ್ಧಿವಂತಿಕೆ ಮತ್ತು ಸ್ಪಷ್ಟ ಯೋಜನೆಯು ದೊಡ್ಡ ಸಂಪತ್ತು ಗಳಿಸಲು ಕಾರಣವಾಗುತ್ತದೆ. ಆಶ್ಚರ್ಯಕರ ರೀತಿಯಲ್ಲಿ ದೊಡ್ಡ ನಗದು ಬಹುಮಾನವನ್ನು ಪಡೆಯುವ ಸಾಧ್ಯತೆಯಿದೆ. ವೃತ್ತಿಪರ ಕ್ಷೇತ್ರದಲ್ಲಿ ಉತ್ತಮ ಪ್ರಗತಿ ಕಂಡುಬರಲಿದೆ.

ಮಿಥುನ ರಾಶಿ

ಮಿಥುನ ರಾಶಿಯಲ್ಲಿ 10ನೇ ಮನೆಯಲ್ಲಿ ರೂಪುಗೊಳ್ಳುವ ಲಕ್ಷ್ಮೀ ನಾರಾಯಣ ರಾಜಯೋಗವು 2025ರ ಉದ್ದಕ್ಕೂ ಶುಭ ಫಲಿತಾಂಶಗಳನ್ನು ತರುತ್ತದೆ. ಮುಂದಿನ ವರ್ಷಾಂತ್ಯದವರೆಗೆ ಹಣದ ಕೊರತೆಯಿಲ್ಲದೆ ಐಷಾರಾಮಿ ಜೀವನ ನಡೆಸಲು ಅವಕಾಶವಿದೆ. ಮುಟ್ಟಿದ್ದೆಲ್ಲ ಚಿನ್ನವಾಗುವ ಈ ರಾಜಯೋಗದಿಂದ ಮಿಥುನ ರಾಶಿಯವರಿಗೆ ಅಗಾಧವಾದ ಆರ್ಥಿಕ ಬೆಳವಣಿಗೆಯನ್ನು ನೀಡುತ್ತದೆ. ಅಧಿಕಾರದ ಉನ್ನತ ಸ್ಥಾನವನ್ನು ಆಕ್ರಮಿಸುವ ಹೆಚ್ಚಿನ ಅವಕಾಶವಿರುತ್ತದೆ.

ವಿಶೇಷ ಸೂಚನೆ: ಈ ಮೇಲೆ ಉಲ್ಲೇಖಿಸಲಾದ ಎಲ್ಲ ಮಾಹಿತಿಯನ್ನು ವಿವಿಧ ಮಾಧ್ಯಮಗಳು / ಜ್ಯೋತಿಷಿಗಳು / ಪಂಚಾಂಗಗಳು / ನಂಬಿಕೆಗಳು / ಆಧ್ಯಾತ್ಮಿಕ ಪಠ್ಯಗಳಿಂದ ಸಂಗ್ರಹಿಸಲಾಗಿದೆ. ಮಾಹಿತಿ ನೀಡುವುದು ಮಾತ್ರ ನಮ್ಮ ಉದ್ದೇಶವಾಗಿದ್ದು, ಇದಕ್ಕೆ ವಿಜಯವಾಣಿ ಡಾಟ್​ ನೆಟ್​ ಸೈಟ್ ಜವಾಬ್ದಾರರಾಗಿರುವುದಿಲ್ಲ.