ನ್ಯೂಸ್

ಗುಳೆ ಹೋದವರ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಕತರ್ನಾಕ್ ಕಳ್ಳ ಅಂದರ್...

ವಿಜಯನಗರ: ಗುಳೆ ಹೋದವರ ಮನೆಗಳನ್ನೇ ಟಾರ್ಗೆಟ್ ಮಾಡುತ್ತಿದ್ದ ಕತರ್ನಾಕ್ ಕಳ್ಳನನ್ನು ಹೊಸಪೇಟೆ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಬಂಧಿತನಿಂದ ಸುಮಾರು ಆರು ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಕೊಪ್ಪಳ ಮತ್ತು ವಿಜಯನಗರ ಜಿಲ್ಲೆ ಪೊಲೀಸರಿಗೆ ತಲೆನೋವಾಗಿದ್ದ ಮನೆಗಳ್ಳನನ್ನು ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಶ್ರೀನಿವಾಸ್ ಮೇಟಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ.

ಹೊಸಪೇಟೆ ತಾಲೂಕಿನ ಸಿರಸಿನಕಲ್ಲು, ಕೆರೆತಾಂಡ, ಕಮಲಾಪುರ, ಕಲ್ಲಹಳ್ಳಿಯಲ್ಲಿ ಮನೆಗಳ ಬೀಗಮುರಿದು ಕಳ್ಳತನ ಮಾಡಿದ್ದು, ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.