ನ್ಯೂಸ್

ವಿಜಯನಗರದಲ್ಲಿ ಮಾನವ ಸರಪಳಿಗೆ ಕ್ಷಣಗಣನೆ

ಮಂಜುನಾಥ

ಹೊಸಪೇಟೆ:  ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ನಿಮಿತ್ತ ಇಂದು ವಿಜಯನಗರ ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಮಾನವ ಸರಪಳಿ ನಡುವೆ ನಿರ್ಮಾಣಕ್ಕೆ ಕ್ಷಣ ಗಣನೆ ಶುರುವಾಗಿದೆ.

ನಗರದ ಹೊರವಲಯದ ಟಿಬಿಡ್ಯಾಂ ಬಳಿಯ ರಾಷ್ಟ್ರೀಯ ಹೆದ್ದಾರಿ 50ರ ವಿಜಯನರ- ಕೊಪ್ಪಳದ ಗಡುಭಾಗಿಂದ ತಾಲೂಕಿನ ಭುವನಹಳ್ಳಿಯ ವಿಜಯನಗರ-ಬಳ್ಳಾರಿ ಗಡಿಭಾಗದ ವರೆಗೆ ಅಂದಾಜು 40 ಸಾವಿರಕ್ಕೂ ಅಧಿಕ ಜನ ಮಾನವ ಸರಪಳಿ ರಚಿಸಲಿದೆ. ಸುರಕ್ಷತೆ ದೃಷ್ಟಿಯಿಂದ ಬೆಳಿಗ್ಗೆ 7ರಿಂದ 11ರವರೆಗೆ ಗಣಿ ಲಾರಿಗಳ ಸಂಚಾರ ನಿರ್ಬಂಧಿಸಲಾಗಿದೆ.

ನಗರದ ಅಂಬೇಡ್ಕರ್ ವೃತ್ತದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಜನಸಂಖ್ಯೆ ಕಡಿಮೆ ಇರುವ ಪ್ರದೇಶಕ್ಕೆ ಹಾಸ್ಟೆಲ್‌ ವಿದ್ಯಾರ್ಥಿಗಳನ್ನು ಬಸ್‌ಗಳಲ್ಲಿ ಕರೆದೊಯ್ದು ಸರಪಳಿ ರಚಿಸಲಾಗುವುದು.ಪ್ರತಿ 100 ಮೀಟರ್‌ಗೆ ಒಬ್ಬರಂತೆ ಸೆಕ್ಟರ್ ಅಧಿಕಾರಿಗಳು, ಪ್ರತಿ 1 ಕಿ.ಮೀ.ಗೆ ಒಬ್ಬರಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಪ್ರತಿ 3 ಕಿ.ಮೀ.ಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ನೋಡಲ್‌ ಅಧಿಕಾರಿಗಳಾಗಿ ನೇಮಕ ಮಾಡಲಾಗಿದೆ.