ಡೆಹ್ರಾಡೂನ್: ಇತ್ತೀಚಿನ ದಿನಗಳಲ್ಲಿ ವಿಮಾನಗಳಲ್ಲಿ ಅಹಿತಕರ ಘಟನೆಗಳು ಹೆಚ್ಚಾಗಿ ವರದಿಯಾಗುತ್ತಿದ್ದು, ಈ ಮಧ್ಯೆ ಕಳಿತುಕೊಳ್ಳುವ ವಿಚಾರವಾಗಿ ಇಬ್ಬರು ಪ್ರಯಾಣಿಕರ ನಡುವೆ ಗಲಾಟೆಯಾಗಿರುವ ಘಟನೆ ಮುಂಬೈ-ಡೆಹ್ರಾಡೂನ್ ವಿಮಾನದಲ್ಲಿ ನಡೆದಿದೆ.
ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ವಿಸ್ತಾರ ಏರ್ಲೈನ್ಸ್ ಪ್ರಕಟಣೆ ಒಂದನ್ನು ಹೊರಡಿಸಿದ್ದು, ವಿಸ್ತೃತವಾದ ಹೇಳಿಕೆ ಒಂದನ್ನು ಬಿಡುಗಡೆ ಮಾಡಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ವಿಸ್ತಾರ ಏರ್ಲೈನ್ಸ್ ಘಟನೆಯೂ ಜೂನ್ 25ರಂದು ಮುಂಬೈ-ಡೆಹ್ರಾಡೂನ್ ವಿಮಾನ ಸಂಖ್ಯೆ UK852ನಲ್ಲಿ ನಡೆದಿದೆ. ಮುಂಬೈನಿಂದ ಡೆಹ್ರಾಡೂನ್ನತ್ತ ಹೊರಟಿದ್ದ ವಿಮಾನದಲ್ಲಿ ಪ್ರಯಾಣಿಕನೋರ್ವ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ಯುವತಿಯಿಂದ ಕಿರಿಕಿರಿ ಅನುಭವಿಸಿದ್ದಾರೆ.
ಈ ಸಂಬಂಧ ಮುಂಬದಿ ಕುಳಿತಿದ್ದ ಪ್ರಯಾಣಿಕ ಯುವತಿಯನ್ನು ಪ್ರಶ್ನಿಸಿದ್ದು, ಇದಕ್ಕೆ ಆಕೆಯ ಪೋಷಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವೇಳೆ ಉಭಯ ಪ್ರಯಾಣಿಕರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕ್ಯಾಬಿನ್ ಕ್ರೂ ಸಿಬ್ಬಂದಿ ಮದ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆದ ಬೆನ್ನಲ್ಲೇ ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧದ ಚರ್ಚೆಯನ್ನು ಹುಟ್ಟುಹಾಕಿದೆ.
ಇತ್ತೀಚಿನ ದಿನಗಳಲ್ಲಿ ವಿಮಾನದಲ್ಲಿ ಪ್ರಯಾಣಿಸುವ ವೇಳೆ ಅಹಿತಕರ ಘಟನೆಗಳು ಹೆಚ್ಚಾಗಿ ನಡೆಯುತ್ತಿದ್ದು, ಪ್ರಯಾಣಿಕರು ಹಾಗೂ ಕ್ಯಾಬಿನ್ ಕ್ರೂ ಸಿಬ್ಬಂದಿ ನಡುವೆ ಕ್ಷುಲಕ ವಿಚಾರಕ್ಕೆ ಗಲಾಟೆಗಳು ನಡೆದಿರುವ ಅನೇಕ ಉದಾಹರಣೆಗಳಿವೆ.