ಇಂಡಿ: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಸ್ಥಳಿಯ ನ್ಯಾಯಾಲಯದಲ್ಲಿ ಮಾ.8 ರಂದು ಬೆಳಗ್ಗೆ 10.30 ರಿಂದ ಸಂಜೆ 5ರ ವರೆಗೆ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಶ್ರೇಣಿಯ ನ್ಯಾಯಾಧೀಶ ಕೋಟಪ್ಪ ಕಾಂಬಳೆ ಹೇಳಿದರು.
ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಕಾನೂನು ಪ್ರಕಾರ ರಾಜಿ ಆಗಬಹುದಾದ ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ್ಯಪಡಿಸಿ ಇಬ್ಬರಿಗೂ ನ್ಯಾಯ ಒದಗಿಸುವ ಉದ್ದೇಶದಿಂದ ಲೋಕ ಅದಾಲತ್ ಆಯೋಜಿಸಲಾಗಿದೆ. ಕಳೆದ ಬಾರಿ ನಡೆದ ಲೋಕ ಅದಾಲತ್ನಲ್ಲಿ 3985ರ ಪೈಕಿ 1991 ಪ್ರಕರಣಗಳು ಇತ್ಯರ್ಥಗೊಂಡಿವೆ. ಈ ಬಾರಿ ಹೆಚ್ಚಿನ ಪ್ರಕರಣ ಇತ್ಯರ್ಥಪಡಿಸುವ ಗುರಿ ಹೊಂದಲಾಗಿದೆ ಎಂದರು.
ಬ್ಯಾಂಕ್, ಪುರಸಭೆ, ಗ್ರಾ.ಪಂ. ಕರವಸೂಲಾತಿ, ೈನಾನ್ಸ್ಸ್, ಬಡ್ಡಿ ವ್ಯವಹಾರ, ಹೊಲ, ಮನೆ, ಅಪಘಾತ, ಚೆಕ್ ಬೌನ್ಸ್, ಸಹಕಾರಿ, ಸಣ್ಣ ಪುಟ್ಟ ಗಲಾಟೆ, ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ವಿಚಾರಣೆ ಮಾಡುವ ಮೂಲಕ ಅಂದೇ ಅಂತಿಮ ರ್ನಿಣಯದ ಮೂಲಕ ರಾಜಿ ಮಾಡಲಾಗುತ್ತದೆ ಎಂದು ಅವರು ಹೇಳಿದರು.
ಕಿರಿಯ ಶ್ರೇಣಿ ನ್ಯಾಯಾಧೀಶ ಸುನೀಲಕುಮಾರ ಸುದ್ದಿಗೋಷ್ಠಿಯಲ್ಲಿದ್ದರು.