ಚಡಚಣ ಪಟ್ಟಣದ ಬಸ್​ ನಿಲ್ದಾಣದಲ್ಲಿ ಶಕ್ತಿ ಯೋಜನೆಯಿಂದ ಬಸ್​ ಹತ್ತಲು ಉಂಟಾದ ನೂಕುನುಗ್ಗಲು. 
ನ್ಯೂಸ್

ಪ್ರಯಾಣಿಕರಿದ್ದಾರೆ, ಬಸ್​ಗಳಿಲ್ಲ !

Vijayapura - Desk - Shamarao Kulkarni

ರೇವತಗಾಂವ: ಸರ್ಕಾರದ ಗ್ಯಾಂಟಿ ಯೋಜನೆಯಲ್ಲೊಂದಾದ ಶಕ್ತಿ ಯೋಜನೆಯಿಂದ ಬಸ್​ಗಳು ಮಹಿಳಾ ಪ್ರಯಾಣಿಕರಿಂದ ತುಂಬಿ ತುಳಕುತ್ತಿವೆ. ದೇವಾಸ್ಥಾನ ಸೇರಿದಂತೆ ಧಾರ್ಮಿಕ ಕೇಂದ್ರ, ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಮಹಿಳೆಯರ ಕನಸಿಗೆ ಈ ಯೋಜನೆ ಶಕ್ತಿ ತುಂಬಿದೆ. ಕುಟುಂಬ ಸಮೇತ ಜನರು ಪ್ರಯಾಣ ಮಾಡುತ್ತಿದ್ದಾರೆ.

ಒಂದೆರಡು ಕಿಲೋಮೀಟರ್​ ದೂರಕ್ಕೆ ನಡೆದುಕೊಂಡೇ ಸಾಗುತ್ತಿದ್ದ ಮಹಿಳಾ ಕೂಲಿ ಕಾರ್ಮಿಕರು, ಬೀದಿಬದಿ ವ್ಯಾಪಾರಿ ಮಹಿಳೆಯರು ಬಸ್​ಗಳಲ್ಲಿ ಸಂಚರಿಸುತ್ತಿದ್ದಾರೆ. ಗಾರ್ಮೆಂಟ್​ ಸಹಿತ ವಿವಿಧೆಡೆ ಕೆಲಸ ಮಾಡುವ ಮಹಿಳೆಯರು ದ್ವಿಚಕ್ರ ವಾಹನಗಳನ್ನು ಬಿಟ್ಟು ಬಸ್​ಗಳಲ್ಲಿ ಸಂಚರಿಸುವ ಮೂಲಕ ಇಂಧನಕ್ಕೆ ಆಗುತ್ತಿದ್ದ ರ್ಖಚನ್ನು ಕಡಿಮೆ ಮಾಡಿಕೊಂಡಿದ್ದಾರೆ.

ಪ್ರಯಾಣಿಕರ ಸಂಖ್ಯೆಗೆ ತಕ್ಕಷ್ಟು ಬಸ್​ಗಳನ್ನು ಓಡಿಸದೇ ಇರುವುದರಿಂದ ನಿತ್ಯ ಜಿಲ್ಲಾ, ತಾಲೂಕು ಕೇಂದ್ರಗಳಿಂದ ಗ್ರಾಮಗಳಿಗೆ ತೆರಳುವ ಸರ್ಕಾರಿ ಉದ್ಯೋಗಿಗಳು, ವಿದ್ಯಾರ್ಥಿಗಳಿಗೆ ಸೀಟು ಸಿಗದೇ ಸಂಕಷ್ಟಪಡಬೇಕಾದ ಪರಿಸ್ಥಿತಿ ಎದುರಾಗಿದೆ.

ಶಾಲೆ&ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳು, ವಿಕಲಚೇತನರು, ವೃದ್ಧರು ತೊಂದರೆ ಅನುಭವಿಸುತ್ತಿದ್ದಾರೆ. ಬಸ್​ಗಾಗಿ ಕಾದು ಸಮಯ ವ್ಯರ್ಥ ಮಾಡುವುದಕ್ಕಿಂತ ಹಣ ಕೊಟ್ಟು ಹೋಗಬೇಕಂದೆರೆ ಖಾಸಗಿ ಬಸ್​ಗಳು ಗ್ರಾಮೀಣ ಪ್ರದೇಶಗಳಿಗೆ ಹೋಗುವುದಿಲ್ಲ ಎನ್ನುವುದು ಪ್ರಯಾಣಿಕರ ದೂರು.

ಸಾರಿಗೆ ಇಲಾಖೆ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಬಸ್​ ಸಂಚಾರದ ವ್ಯವಸ್ಥೆ ಮಾಡಬೇಕು ಎಂಬುದು ಪ್ರಯಾಣಿಕರ ವಾದವಾಗಿದೆ.