ನ್ಯೂಸ್

ಹುಬ್ಬಳ್ಳಿಯಲ್ಲಿ ಸಾವಿಗೆ ಶರಣಾದ ಯುವ ಪೊಲೀಸ್​ ಕಾನ್ಸ್​ಟೆಬಲ್​

ಹುಬ್ಬಳ್ಳಿ: ಪೊಲೀಸ್​ ಕಾನ್ಸ್​ಟೆಬಲ್​ ಒಬ್ಬರು ನೇಣಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯ ಬೆಂಡಿಗೇರಿಯ ದೊಡ್ಡಮನಿ ಕಾಲನಿಯಲ್ಲಿ ನಡೆದಿದೆ.

ಮಲ್ಲಿಕಾರ್ಜುನ ರುದ್ರಾಪೂರ್ ಆತ್ಮಹತ್ಯೆ ಮಾಡಿಕೊಂಡ ಕಾನ್ಸ್‌ಟೆಬಲ್. ಇವರು ಮೂಲತಃ ಬೆಳಗಾವಿಯ ಸಂಗೊಳ್ಳಿ ಗ್ರಾಮದ ನಿವಾಸಿ. ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ಏನು ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ.

ಆತ್ಮಹತ್ಯೆ ಕುರಿತು ಮಾಹಿತಿ ತಿಳಿದ ಬೆನ್ನಲ್ಲೇ ಘಟನಾ ಸ್ಥಳಕ್ಕೆ ಬೆಂಡಿಗೇರಿ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಕಾರಣ ತಿಳಿಯಲು ತನಿಖೆ ಆರಂಭಿಸಿದ್ದಾರೆ.

ಇತ್ತ ಮಲ್ಲಿಕಾರ್ಜುನ್​ ಸಾವಿನ ಸುದ್ದಿ ತಿಳಿದ ಕೂಡಲೇ ಪಾಲಕರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಶವಪರೀಕ್ಷೆಯ ಬಳಿಕ ಮಲ್ಲಿಕಾರ್ಜುನ್​ ಮೃತದೇಹವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗುತ್ತದೆ. (ಏಜೆನ್ಸೀಸ್​)