ನ್ಯೂಸ್

ಮಾನವ ಹಕ್ಕುಗಳ ಆಯೋಗ; ಶಾಮ್ ಭಟ್ ನೇಮಕ ಚರ್ಚೆಗೆ ಗ್ರಾಸ

ಬೆಂಗಳೂರು: ಮಾನವ ಹಕ್ಕುಗಳ ಆಯೋಗದ ಸದಸ್ಯರನ್ನಾಗಿ ಕೆಪಿಎಸ್‌ಸಿ ಮಾಜಿ ಚೇರ್ಮನ್ ಟಿ.ಶಾಮ್ ಭಟ್ ಅವರನ್ನು ನೇಮಕ ಮಾಡಿರುವುದು ಚರ್ಚೆಗೆ ಒಳಗಾಗಿದೆ.

ಸರ್ಕಾರ ಮಾನವ ಹಕ್ಕುಗಳ ಆಯೋಗಕ್ಕೆ ನ್ಯಾ.ಎಲ್.ನಾರಾಯಣಸ್ವಾಮಿ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಸದಸ್ಯರಾಗಿ ಎಲ್.ಶಾಮ್ ಭಟ್ ಹಾಗೂ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಕೆ.ವಂಟಿಗೋಡಿ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.

ನ್ಯಾ.ಎಲ್.ನಾರಾಯಣಸ್ವಾಮಿ ಅವರು ಮೂಲತಃ ಚಳ್ಳಕೆರೆಯವರಾಗಿದ್ದು, 1987ರಲ್ಲಿ ವಕೀಲಿ ವೃತ್ತಿ ಆರಂಭಿಸಿದ್ದರು. 2007ರಲ್ಲಿ ಹೈಕೋರ್ಟ್ ನ್ಯಾಯಮೂರ್ತಿಯಾಗಿ, 2019 ರಲ್ಲಿ ಹಿಮಾಚಲ ಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ, 2021ರಲ್ಲಿ ನಿವೃತ್ತಿ ಹೊಂದಿದ್ದರು.

ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಈ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡುವ ಕುರಿತು ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು.