ನ್ಯೂಸ್

ಪ್ರಿಯಕರನ ಜತೆಗೂಡಿ ಪತಿಯನ್ನು ಕೊಂದ ಪ್ರಕರಣ; ಬೈಕ್​ ಮೇಲೆ ಶವ ಹೊತ್ತೊಯ್ಯುತ್ತಿರುವ ದೃಶ್ಯ ಸೆರೆ | Bike Captured

Bike Captured : ಪತ್ನಿಯ ಹುಟ್ಟುಹಬ್ಬದ ದಿನ ಆಕೆಗೆ ಸರ್ಪ್ರೈಸ್ ಕೊಡಲು ಲಂಡನ್ ನಿಂದ ಬಂದ ವ್ಯಕ್ತಿಯನ್ನ ಹೆಂಡತಿ ಮತ್ತು ಆಕೆಯ ಪ್ರಿಯತಮ ಇಬ್ಬರೂ ಸೇರಿ ಆತನನ್ನು 15 ತುಂಡುಗಳಾಗಿ ಕತ್ತರಿಸಿದ್ದಾರೆ. ಅಲ್ಲದೆ, ಆತನ ತುಂಡರಿಸಿದ ದೇಹವನ್ನು ಸಿಮೆಂಟ್ ತುಂಬಿದ ಡ್ರಮ್‌ನಲ್ಲಿ ಬಚ್ಚಿಟ್ಟಿದ್ದ ಪ್ರಕರಣ ಮಾ.17 ಬೆಳಕಿಗೆ ಬಂದಿದೆ. ಇದೀಗ ಕೃತ್ಯಕ್ಕೆ ಸಂಬಂಧಪಟ್ಟಂತೆ ವಿಡಿಯೋಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಉತ್ತರ ಪ್ರದೇಶದ ಮೀರತ್‌ನಲ್ಲಿ 27 ವರ್ಷದ ಮುಸ್ಕಾನ್ ಎಂಬ ಮಹಿಳೆ ತನ್ನ ಪ್ರಿಯಕರ ಸಾಹಿಲ್ ಎಂಬವವರ ಜೊತೆ ಸೇರಿ ತನ್ನ ಮರ್ಚೆಂಟ್ ನೇವಿ ಅಧಿಕಾರಿಯಾದ 29 ವರ್ಷದ ಸೌರಬ್ ರಜಪೂತ್ ಎಂಬ ಪತಿಯನ್ನು ಇರಿದು ಕೊಂದಿದ್ದಾರೆ. ನಂತರ ಆತನ ದೇಹವನ್ನು 15 ತುಂಡುಗಳಾಗಿ ಕತ್ತರಿಸಿ ಹಾಕಿದ್ದು, ಕತ್ತರಿಸಿದ ದೇಹದ ಭಾಗಗಳನ್ನು ಸಿಮೆಂಟ್ ತುಂಬಿದ ಡ್ರಮ್‌ ನಲ್ಲಿ ಮುಚ್ಚಿಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಕೃತ್ಯ ಬೆಳಕಿಗೆ ಬರುತ್ತಿದ್ದ ಹಾಗೆ ಮೃತ ವ್ಯಕ್ತಿಯ ಪತ್ನಿ ಮುಸ್ಕಾನ್ ಮತ್ತು ಆಕೆಯ ಪ್ರಿಯಕರ ಸಾಹಿಲ್ ರನ್ನು ಬಂಧಿಸಿದ್ದೇವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಮಾರ್ಚ್ 4 ರಂದು ವಾಣಿಜ್ಯ ನೌಕಾಪಡೆಯ ಸೌರಬ್ ರಜಪೂತ್ ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿತ್ತು. ಈ ಬಗ್ಗೆ ಮಾಹಿತಿ ಪಡೆದ ನಂತರ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇನ್ನೂ ಮೀರತ್‌ನ ಇಂದಿರಾ ನಗರದಲ್ಲಿ ದುರ್ವಾಸನೆ ಬರುತ್ತಿದ್ದ ಕಾರಣ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ ಈ ಕೃತ್ಯ ಬೆಳಕಿಗೆ ಬಂದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಆಯುಷ್ ವಿಕ್ರಮ್ ಸಿಂಗ್ ತಿಳಿಸಿದ್ದಾರೆ.

ವಿಡಿಯೋದಲ್ಲೇನಿದೆ?

ಇದೀಗ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಳ್ಳಲಾಗದ ವಿಡಿಯೋಂದು ವೈರಲ್​ ಆಗಿದೆ. ಇನ್ನು ವಿಡಿಯೋದಲ್ಲಿ ಮಹಿಳೆ ಮತ್ತು ಆಕೆಯ ಪ್ರೇಮಿ ಮಹಿಳೆಯ ಪತಿಯ ಶವವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿರುವ ದೃಶ್ಯಗಳು ಸೆರೆಯಾಗಿವೆ.(ಏಜೆನ್ಸೀಸ್​)