ಆಗ್ರಾ: ಹೆಂಡತಿಯ ಮೇಲಿನ ಸಿಟ್ಟಿಗೆ ಆಕೆಯ ಅಶ್ಲೀಲ ಪೋಸ್ಟರ್‌ಗಳನ್ನು ಮೊಬೈಲ್ ಸಂಖ್ಯೆಯೊಂದಿಗೆ ಗೋಡೆಯ ಮೇಲೆ ಅಂಟಿಸಿರುವ ಅಸಹ್ಯಕರ ಘಟನೆ ಉತ್ತರಪ್ರದೇಶದ ಆಗ್ರಾದಲ್ಲಿ ನಡೆದಿದೆ.
ಕಮಲಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಾಸವಾಗಿರುವ ಮಹಿಳೆಯೊಬ್ಬರು ಪತಿಯ ವಿರುದ್ಧ ಈ ಗಂಭೀರ ಆರೋಪ ಮಾಡಿದ್ದು, ಪತಿ ತನ್ನ ಮೇಲೆ ಹಲ್ಲೆ ನಡೆಸಿ ಬೇರೆಯವರಿಗೆ ಒಪ್ಪಿಸಿದ್ದಾನೆ. ನಾನು ಈ ಕೃತ್ಯವನ್ನು ವಿರೋಧಿಸಿದಾಗ ಆತ ನನ್ನ ಖಾಸಗಿ ಫೋಟೊಗಳನ್ನು ಸಾರ್ವಜನಿಕವಾಗಿ ಅಂಟಿಸಿದ್ದಾನೆ ಎಂದು ಆರೋಪಿಸಿದ್ದಾಳೆ.
ಸದ್ಯ, ಪೋಸ್ಟರ್ ಅಂಟಿಸುತ್ತಿರುವ ವ್ಯಕ್ತಿಯೊಬ್ಬನ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅದು ಈತನಿಗೆ ಸಂಬಂಧಿಸಿದೆ ಎಂದು ಹೇಳಲಾಗುತ್ತಿದೆ.ಈ ಕುರಿತು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮಹಿಳೆ ಮತ್ತು ಆರೋಪಿಯ ಗುರುತನ್ನು ಪೊಲೀಸರು ಬಹಿರಂಗಪಡಿಸಿಲ್ಲ.(ಏಜೆನ್ಸೀಸ್)