ಮುಂಬೈ: ಬೇರೊಂದು ಮಹಿಳೆಯ ಜೊತೆ ಅಕ್ರಮ ಸಂಬಂಧ (illegal affair) ಹೊಂದಿರುವ ವಿಚಾರ ತಿಳಿದು ಡಿವೋರ್ಸ್ (Divorce) ಕೇಳಿದ್ದಕ್ಕೆ ವ್ಯಕ್ತಿಯೋರ್ವ ತನ್ನ ಪತ್ನಿ ಮೇಲೆ ಆ್ಯಸಿಡ್ ಎರಚಿ (Acid Attack) ಹತ್ಯೆಗೆ ಯತ್ನಿಸಿರುವ ಘಟನೆ ಮುಂಬೈನ ಮಲಾಡ್‌ನಲ್ಲಿ ನಡೆದಿದೆ.
ಘಟನೆ ಸಂಬಂಧ 27 ವರ್ಷದ ಸಂತ್ರಸ್ತ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ತಲೆಮಾರಿಸಿಕೊಂಡಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಘಟನೆ ಕುರಿತು ಪ್ತತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, 2019ರಲ್ಲಿ ಈ ಜೋಡಿ ಪ್ರೀತಿಸಿ ಮದುವೆಯಾಗಿದ್ದರು. ಗಂಡನ ಮಾದಕ ವ್ಯಸನಿಯಾಗಿದ್ದು, ಈತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ. ಈ ವಿಚಾರ ತಿಳಿದ ಸಂತ್ರಸ್ತ ಮಹಿಳೆ ಕಳೆದ ಮೂರು ತಿಂಗಳಿನಿಂದ ಆತ ದೂರಾಗ ಪ್ರತ್ಯೇಕವಾಗಿ ವಾಸಿಸುತ್ತಿದ್ದರು.
ಆರೋಪಿಯು ಸೆಪ್ಟೆಂಬರ್ 25ರಂದು ಮಲಾಡ್‌ನಲ್ಲಿ ಸಂತ್ರಸ್ತೆ ತನ್ನ ತಾಯಿಯ ನಿವಾಸದಲ್ಲಿದ್ದಾಗ ಆರೋಪಿ ಆಕೆಯ ಮೇಲೆ ಆ್ಯಸಿಡ್ ಎರಚಿ ಪರಾರಿಯಾಗಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಲೆಮಾರಿಸಿಕೊಂಡಿರುವ ಆರೋಪಿ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 124 (2), 311ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.