ನ್ಯೂಸ್

ನನ್ನ ಪತಿಗೆ ಅಕ್ರಮ ಸಂಬಂಧ ಇದೆ; ಫೇಸ್‌ಬುಕ್ ಲೈವ್‌ನಲ್ಲಿ ಪ್ರಾಣ ಕಳೆದುಕೊಂಡ ಮಹಿಳಾ ಟೆಕ್ಕಿ

ಹೈದರಾಬಾದ್​​: ಗಂಡ-ಹೆಂಡತಿಯ ಸಂಬಂಧ ಸುಂದರವಾದ ಬಂಧವಾಗಿದೆ. ಆದರೆ ಈ ಸಂಬಂಧದಲ್ಲಿ ಕೊಂಚ ವ್ಯತ್ಯಾಸವಾದರು ಸಂಸಾರವೇ ಬಿದಿಗೆ ಬರುತ್ತದೆ. ಹೀಗೆ ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆಯೊಬ್ಬರು ಫೇಸ್‌ಬುಕ್​​ ಲೈವ್​​ನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ.

ಹೈದರಾಬಾದ್ ಮೂಲದ ಸನಾ( 32) ಮೃತ ಮಹಿಳೆ. ಸನಾ ನನ್ನ ಗಂಡನಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್‌ನಲ್ಲೇ ಆತ್ಮಹತ್ಯೆಮಾಡಿಕೊಂಡಿದ್ದಾರೆ.

ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿಯಾಗಿದ್ದ ಹೇಮಂತ್‌ ಎನ್ನುವವರನ್ನು ಪ್ರಿತಿಸಿ ವಿವಾಹವಾಗಿದ್ದರು. ಆ ಸಮಯದಲ್ಲಿ ಹೇಮಂತ್ ನಿರುದ್ಯೋಗಿಯಾಗಿದ್ದರು. ಸನಾ ಆಗ ದೆಹಲಿಯ ಏರ್‌ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ವಿವಾಹದ ಬಳಿಕ ಹೇಮಂತ್‌ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧವನ್ನಿಟ್ಟುಕೊಂಡಿದ್ದರು. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್​​​ಬುಕ್‌ ಲೈವ್‌ ನಲ್ಲೇ ಸನಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ವೇಳೆ ಅವರು ಗಂಡನ ವಿರುದ್ಧ ಕಿರುಕುಳದ ಆರೋಪವನ್ನು ಮಾಡಿದ್ದಾರೆ. ಸನಾ ಮನೆಯವರು ಆಕೆಯ ಆತ್ಮಹತ್ಯೆಗೆ ಹೇಮಂತ್ ಕಾರಣ ಎಂದು ಆರೋಪಿಸಿದ್ದಾರೆ.  ಸಂತ್ರಸ್ತೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.