ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ನಂತರ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಭರ್ಜರಿ ಗೆದ್ದಿರುವ ಕೇಂದ್ರ ಸಚಿವರಾಗಿ ಎಚ್.ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸಿದರು.
ಇದನ್ನೂ ಓದಿ: ಮೋದಿ ಪದಗ್ರಹಣದ: 3 ಕೆ.ಜಿ ಶುದ್ಧ ಬೆಳ್ಳಿಯಲ್ಲಿ ಅರಳಿದ ಕಮಲ, ಜಮ್ಮು ಅಭಿಮಾನಿಯಿಂದ ವಿಶೇಷ ಉಡುಗೊರೆ ಸಿದ್ಧ
ರಾಷ್ಟ್ರಪತಿ ಭವನದಲ್ಲಿ ನಡೆದ ಅಧಿಕೃತ ಕಾರ್ಯಕ್ರಮದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಮಾಣ ವಚನ ಬೋಧಿಸಿದರು. ಈ ಬಾರಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬರಲು ಮೈತ್ರಿ ಪಕ್ಷವಾಗಿ ಜೆಡಿಎಸ್ ಕೈ ಜೋಡಿಸಿತ್ತು.
ಸಂಸದ ಎಚ್.ಡಿ ಕುಮಾರಸ್ವಾಮಿ ಅವರು ಮೂರನೇ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ಇದಕ್ಕೂ ಮುನ್ನ ಕನಕಪುರ ಲೋಕಸಭಾ ಕ್ಷೇತ್ರದಿಂದ ಮೊದಲ ಬಾರಿ ಸಂಸದರಾಗಿದ್ದರು. ನಂತರ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಎರಡನೇ ಬಾರಿ ಲೋಕಸಭೆ ಪ್ರವೇಶ ಮಾಡಿದ್ದರು. ಇದೀಗ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಭಾರೀ ಅಂತರದಿಂದ ಗೆದ್ದು ಸಂಸತ್ ಪ್ರವೇಶಿಸಿದ್ದಾರೆ. ಎಚ್.ಡಿ ಕುಮಾರಸ್ವಾಮಿ ಅವರು ಮೊದಲ ಬಾರಿಗೆ ಕೇಂದ್ರದಲ್ಲಿ ಸಚಿವರಾಗುತ್ತಿದ್ದಾರೆ.
ನವದೆಹಲಿ: ಭಾರತದ ಹೊಸ ಸಮ್ಮಿಶ್ರ ಸರ್ಕಾರದ 72 ಸಚಿವರೊಂದಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೊದಲು ಇಂದು 30 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿತ್ತು. ಆದರೆ, ಆ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ. ಅವರಲ್ಲಿ 30 ಕ್ಯಾಬಿನೆಟ್ ಮಂತ್ರಿಗಳು, 5 ಸ್ವತಂತ್ರ ಉಸ್ತುವಾರಿ ಮತ್ತು 36 ರಾಜ್ಯ ಸಚಿವರು ಸೇರಿದ್ದಾರೆ.