ಶಿವಮೊಗ್ಗ: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ(CM) ಐದು ವರ್ಷ ಮುಂದುವರಿಯಲಿದ್ದಾರೆಂದು ನಾನು ಹೇಳಲು ಸಾಧ್ಯವಿಲ್ಲ. ಆದರೆ, ಅದು ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು.
ನಗರದ ವಿಮಾನ ನಿಲ್ದಾಣದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ನಮ್ಮ ಪಕ್ಷದವರೇ ಗೊಂದಲ ಮೂಡಿಸುತ್ತಿದ್ದಾರೆ. ಇದು ಎಲ್ಲ ಪಕ್ಷದಲ್ಲೂ ಇದ್ದೇ ಇರುತ್ತದೆ. ನಮ್ಮ ಪಕ್ಷದಲ್ಲಿ ನೊಣ ಸತ್ತು ಬಿದ್ದರೆ, ಬಿಜೆಪಿಯಲ್ಲಿ ಹೆಗ್ಗಣವೇ ಸತ್ತು ಬಿದ್ದಿದೆ. ಹಾಗಾಗಿ ಸಿಎಂ ಬದಲಾವಣೆಯನ್ನು ವರಿಷ್ಠರೇ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದರು.
ಇದನ್ನೂ ಓದಿ:ಅವಳಿ ಮಕ್ಕಳು ಕೋರಿದ ಟಾಕ್ಸಿಕ್ ಹೀರೋಹಿನ್; ಕರೀನಾ ಕಪೂರ್ ಗುಣಗಳು ಮಗುವಿನಲ್ಲಿರಲಿ ಎಂದ ಕಿಯಾರಾ ಅಡ್ವಾಣಿ | Twins
ಇಶಾ ಫೌಂಡೇಶನ್ ಕಾರ್ಯಕ್ರಮಕ್ಕೆ ಕರೆದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೋಗಿದ್ದಾರೆ. ಅದನ್ನು ಬಿಜೆಪಿಯವರು ರಾಜಕೀಯಕ್ಕೆ ಬಳಸಿಕೊಂಡರೆ ಏನೆಂದು ಹೇಳಬೇಕು ಎಂದು ಪ್ರಶ್ನಿಸಿದ ಅವರು, ಆರ್‌ಎಸ್‌ಎಸ್‌ನಲ್ಲಿ ಎರಡು ವಿಭಾಗವಿದೆ. ಒಂದು ಭಾಗ ಇಂತಹ ಬೇಡದ ರಾಜಕಾರಣವನ್ನೇ ಮಾಡುತ್ತದೆ. ಹಿಂದು ಆಗಿ ಕುಂಭಮೇಳಕ್ಕೆ ಡಿ.ಕೆ.ಶಿವಕುಮಾರ್ ಹೋಗಿದ್ದಾರೆ. ಅದನ್ನು ಬಿಜೆಪಿಗೆ ಹೋಗುತ್ತಾರೆಂದು ಬಿಂಬಿಸುವುದು ಸರಿಯಲ್ಲ ಎಂದರು.