Kamal Haasan: ನಟ ಕಮಲ್ ಹಾಸನ್ ಕನ್ನಡ ಭಾಷೆ ಬಗ್ಗೆ ಇತ್ತೀಚಿಗೆ ನೀಡಿದ್ದ ವಿವಾದಾತ್ಮಕ ಹೇಳಿಕೆ ಬಗ್ಗೆ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದು ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಈ ಕುರಿತು ಮಾತನಾಡಿರುವ ಕಮಲ್ ಹಾಸನ್ ನಾನು ತಪ್ಪು ಮಾಡಿಲ್ಲ, ಕ್ಷಮೆ ಕೇಳಲ್ಲ ಎಂದು ಪುನರುಚ್ಚರಿಸಿದ್ದಾರೆ.
ಇದನ್ನೂ ಓದಿ:ವಿಜಿಲೆನ್ಸ್ ದಾಳಿಗೆ ಹೆದರಿ 500 ರೂ. ಬಂಡಲ್ಗಳನ್ನು ಕಿಟಕಿಯಿಂದ ಹೊರ ಎಸೆದ ಸರ್ಕಾರಿ ನೌಕರ!| Vigilance Raid
''ಕ್ಷಮೆಯಾಚಿಸಬೇಕೆಂಬ ಬೇಡಿಕೆಯನ್ನು ಹಿರಿಯ ನಟ ತಳ್ಳಿಹಾಕಿದ್ದು, ನಾನು ತಪ್ಪು ಮಾಡಿದ್ದರೆ ಮಾತ್ರ ಕ್ಷಮೆಯಾಚಿಸುತ್ತೇನೆ. ಇದು ನನ್ನ ಜೀವನಶೈಲಿ, ದಯವಿಟ್ಟು ಹಾಳು ಮಾಡಬೇಡಿ" ಎಂದು ನಟ ಕಮಲ್ ಇಂಡಿಯಾ ಟುಡೇಗೆ ಶುಕ್ರವಾರ ಹೇಳಿಕೆ ನೀಡಿದ್ದಾಗಿ ವರದಿಯಾಗಿದೆ.
“ಭಾರತವು ಪ್ರಜಾಪ್ರಭುತ್ವ ರಾಷ್ಟ್ರ, ನಾನು ಕಾನೂನು ಮತ್ತು ನ್ಯಾಯವನ್ನು ನಂಬುತ್ತೇನೆ” ಎಂದು ಕಮಲ್ ಹೇಳಿದ್ದಾರೆ.
ಇತ್ತೀಚೆಗೆ ತಮ್ಮ ಮುಂಬರುವ ಚಿತ್ರ ಥಗ್ ಲೈಫ್ನ ಪ್ರಚಾರ ಕಾರ್ಯಕ್ರಮದಲ್ಲಿ “ಕನ್ನಡ ತಮಿಳಿನಿಂದ ಹುಟ್ಟಿತು” ಎಂದು ನಟ-ರಾಜಕಾರಣಿ ಕಮಲ್ ಹಾಸನ್ ನೀಡಿದ್ದರು. ಈ ಹೇಳಿಕೆ ಕರ್ನಾಟಕದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಪರ ಗುಂಪುಗಳು, ಸಾಂಸ್ಕೃತಿಕ ಸಂಘಟನೆಗಳು ಮತ್ತು ಹಲವಾರು ರಾಜಕೀಯ ನಾಯಕರು, ಸಿನಿಮಾ ನಟರು ಸೇರಿ ಕಮಲ್ ಹಾಸನ್ ಕ್ಷಮೆಯಾಚಿಸಲು ಒತ್ತಾಯಿಸಿದ್ದಾರೆ.(ಏಜೆನ್ಸೀಸ್)