ಬೆಳಗಾವಿ: ಜಲಸಂಪನ್ಮೂಲದಂಥ ದೊಡ್ಡ ಖಾತೆ ನಿಭಾಯಿಸುವ ಜತೆಗೆ ಜಿಲ್ಲಾ ಉಸ್ತುವಾರಿಯನ್ನೂ ನಿಭಾಯಿಸುವುದು ಸಾಧ್ಯವಿಲ್ಲ. ಹಾಗಾಗಿ ಸದ್ಯಕ್ಕೆ ಸಚಿವ ಜಗದೀಶ ಶೆಟ್ಟರ್ ಅವರನ್ನೇ ಉಸ್ತುವಾರಿಯಾಗಿ ಮುಂದುವರಿಸುವಂತೆ ಖುದ್ದು ನಾನೇ ಸಿಎಂಗೆ ವಿನಂತಿಸಿದ್ದೇನೆ ಎಂದು ಸಚಿವ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿ ಉಸ್ತುವಾರಿಯನ್ನು ಸ್ವತಃ ಮುಖ್ಯಮಂತ್ರಿಗಳೇ ನನಗೆ ಕೊಡಲು ಬಯಸಿದ್ದರು. ಆದರೆ ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಜವಾಬ್ದಾರಿಯೂ ದೊಡ್ಡದಿರುತ್ತದೆ. ಜಗದೀಶ್ ಶೆಟ್ಟರ್ ಬೇರೆ ಅಲ್ಲ, ನಾನು ಬೇರೆ ಅಲ್ಲ. ಅವರಾದರೆ ನಾನೇ ಆದಂತೆಯೇ. ಜಲಸಂಪನ್ಮೂಲ ಖಾತೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತೇನೆ ಎಂದು ಶುಕ್ರವಾರ ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ನನ್ನ ಮೇಲೆ ನಂಬಿಕೆ ಇಟ್ಟು ಮುಖ್ಯಮಂತ್ರಿ ಯಡಿಯೂರಪ್ಪ ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ನೀಡಿದ್ದಾರೆ. ಅದನ್ನು ಸಮರ್ಥವಾಗಿ ನಿಭಾಯಿಸುವೆ. | ಶಿವರಾಮ ಹೆಬ್ಬಾರ ಸಚಿವ