ನ್ಯೂಸ್

ಮೈಸೂರು ರಸ್ತೆಗೆ ಹೆಸರಿಡುವ ವಿಚಾರ; ನನ್ನ ರಾಜಕೀಯದ ಅವಧಿಯಲ್ಲಿ ಎಂದಿಗೂ ನನ್ನ ಹೆಸರಿನ್ನಿಡುವಂತೆ ತಿಳಿಸಿಲ್ಲ: CM ಸಿದ್ದರಾಮಯ್ಯ

ಮೈಸೂರು: ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ  ಮಾರ್ಗ ಎಂದು ಹೆಸರಿಡುವ ಬಗ್ಗೆ ರಾಜಕಾರಣ ನಡೆಯುತ್ತಿರುವ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್ ಅನ್ನು ನಾನು ನಿರಾಕರಿಸಿದ್ದೇನೆ ಎಂದು ಹೇಳಿದರು.

ಮೈಸೂರಿನ ವಿಮಾನ ನಿಲ್ದಾಣದಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದರು.

ನಕ್ಸಲಿಂ ತೊಡೆದುಹಾಕವುದು ಸರ್ಕಾರದ ಉದ್ದೇಶ

ನಕ್ಸಲಿಂ ಸಂಪೂರ್ಣ ತೊಡೆದುಹಾಕವುದು ಕಾಂಗ್ರೆಸ್ ಸರ್ಕಾರದ ಉದ್ದೇಶ.ಯಾವುದೇ ಹೋರಾಟಗಳಾಗಲಿ ಶಾಂತಿಯುತವಾಗಿರಬೇಕೇ ಹೊರತು ಹಿಂಸಾತ್ಮಕ ದಾರಿ ಹಿಡಿಯಬಾರದೆಂಬುದು ಸರ್ಕಾರದ ನಿಲುವು ಎಂದು ಸಿಎಂ  ತಿಳಿಸಿದರು.

ಶರಣಾಗತರಾದ ನಕ್ಸಲರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳುವ ಬಗ್ಗೆ  ಹಾಗೂ ನಕ್ಸಲರ ಶರಣಾಗತಿಯ ಬಗ್ಗೆ ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ನಕ್ಸಲರು ಶರಣಾಗಿದ್ದು, ಅವರ ಶಸ್ತ್ರಾಸ್ತ್ರಗಳನ್ನೂ ಮೊಹಜರು ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ.

ಹೋರಾಟುಗಳು ಸಂವಿಧಾನತ್ಮಕ ರೀತಿಯಲ್ಲಿ ನಡೆಯಬೇಕೆಂದು ಡಾ.ಅಂಬೇಡ್ಕರ್ ರವರೂ ಹೇಳಿದ್ದಾರೆ. ಅನ್ಯಾಯದ ವಿರುದ್ಧ ಧ್ವನಿಎತ್ತಲು ಸಂವಿಧಾನದಲ್ಲಿ ಅವಕಾಶವಿದ್ದರೂ, ಕಾನೂನನ್ನು ಕೈಗೆ ತೆಗೆದುಕೊಳ್ಳುವ ಅವಕಾಶ ಯಾರಿಗೂ ನೀಡಲಾಗಿಲ್ಲ. ಶೃಂಗೇರಿಯಲ್ಲಿ ಮತ್ತೊಬ್ಬ ನಕ್ಸಲ್ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೂ ಅವರೂ ಕೂಡ ಕಾನೂನಿಗೆ ಶರಣಾಗಿ ಮುಖ್ಯವಾಹಿನಿಗೆ ಬರುವಂತಾಗಲಿ ಎಂದು ಕೋರುವುದಾಗಿ ತಿಳಿಸಿದರು.

ಇದನ್ನೂ ಓದಿ: 

ಅಂಬೇಡ್ಕರ್ ಕುರಿತ ಕಾಂಗ್ರೆಸ್ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ

ಕಾಂಗ್ರೆಸ್ ಸರ್ಕಾರಕ್ಕೆ ಅಂಬೇಡ್ಕರ್ ರವರ ಕುರಿತ ಬದ್ಧತೆಯನ್ನು ತೋರ್ಪಡಿಸುವ ಅಗತ್ಯವಿಲ್ಲ, ಸಂವಿಧಾನದ ರಕ್ಷಣೆಯಲ್ಲಿ ತೊಡಗಿರುವ ಕಾಂಗ್ರೆಸ್ ಸರ್ಕಾರ, ಅದರ ಆಶಯಗಳ ಅನುಷ್ಠಾನಕ್ಕೆ ಬದ್ಧವಾಗಿದೆ ಎಂದು ತಿಳಿಸಿದರು.

ಕೇಂದ್ರದಲ್ಲಿ  ರೈತವಿರೋಧಿ ಸರ್ಕಾರವಿದೆ

ನವದೆಹಲಿಯಲ್ಲಿ ಎಂಎಸ್ ಪಿ ಬೇಡಿಕೆ ಸಂಬಂಧ ರೈತರ ಬಹಳ ದಿನಗಳಿಂದ ಪ್ರತಿಭಟನೆ ನಡೆಯುತ್ತಿದ್ದು, ಕೇಂದ್ರ ಸರ್ಕಾರ ಅವರ ನ್ಯಾಯಬದ್ಧ ಬೇಡಿಕೆಗೆ ಸ್ಪಂದಿಸುತ್ತಿಲ್ಲವೆಂಬ ಬಗ್ಗೆ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿ, ಕೇಂದ್ರಸರ್ಕಾರ ರೈತರ ಪರವಾದ ಸರ್ಕಾರವಲ್ಲ. ಬೆಳೆಗಳಿಗೆ ಎಂಎಸ್ ಪಿ ನೀಡುವುದಕ್ಕೆ ಕಾನೂನು ರಚಿಸುವಂತೆ ರೈತರ ಬೇಡಿಕೆಯಾಗಿದ್ದು, ಈ ಬೇಡಿಕೆಗೆ ಮಣಿಯದ ಅಮಾನವೀಯ ಹಾಗೂ ರೈತವಿರೋಧಿ ಸರ್ಕಾರವಾಗಿದೆ. ನೂರಾರು ರೈತರು ಪ್ರತಿಭಟನೆಯನ್ನು ಪ್ರಾಣ ಕಳೆದುಕೊಂಡಿದ್ದರೂ ಸಹ  ರೈತರ ಬೇಡಿಕೆಗೆ ಮಣಿಯುತ್ತಿಲ್ಲ ಎಂದರು.

ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ

ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.