ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರದಲ್ಲಿ ನನ್ನ ನಿಲುವು ಏನೂ ಇಲ್ಲ. ಇದರಲ್ಲಿ ನಮ್ಮದೇನಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದರು.
ಕೊಪ್ಪಳದ ಬಸಾಪುರ ಲಘು ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೆಲ ಸ್ವಾಮೀಜಿಗಳು ಈ ಬಗ್ಗೆ ಮಾತನಾಡುತ್ತಿದ್ದಾರೆ. ಇದರಲ್ಲಿ ನಮ್ಮದು ಏನು ಇಲ್ಲ ಎಂದರು. ಇನ್ನು ಈ ವೇಳೆ ಕಿವಿಯಲ್ಲಿ ಮಾಹಿತಿ ನೀಡಲು ಬಂದ ಸಚಿವ ತಂಗಡಗಿಗೆ ಸಿದ್ದು ಗದರಿದ ಪ್ರಸಂಗ ನಡೆಯಿತು.
ಗ್ಯಾರಂಟಿಯೋಜನೆ ಕೆಲ ತಿಂಗಳು ಬಂದ್ ಆಗಿವೆ ಎಂಬ ಪ್ರಶ್ನೆಗೆ ನಿಮಗೆ ಯಾರು ಹೇಳಿದ್ದು ಎಂದು ಸಿಎಂ ಗರಂ ಆದರು. ಬೇರೆ ರಾಜ್ಯದಲ್ಲಿ ಕೆಮ್ಮು ಟಾನಿಕ್ ಸೇವಿಸಿ ಮಕ್ಕಳು ಮೃತಪಟ್ಟ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಲರ್ಟ್ ಆಗಲು ಆರೋಗ್ಯ ಇಲಾಖೆಗೆ ಸೂಚಿಸಿರುವುದಾಗಿ ತಿಳಿಸಿದರು.
ರಾಜ್ಯದಲ್ಲಿ ನವೆಂಬರ್ ನಲ್ಲಿ ಯಾವ ಕ್ರಾಂತಿಯೂ ನಡೆಯುವುದಿಲ್ಲ. ಅದೆಲ್ಲ ಭ್ರಾಂತಿ. ನವೆಂಬರ್ ನಲ್ಲಿ ಸಿಎಂ ಬದಲಾವಣೆ ಮತ್ತಿತರ ಕ್ರಾಂತಿ ಯಾವೂದು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.
ಸಮ ಸಮಾಜ ನಿರ್ಮಾಣ, ಸರ್ವರ ಅಭಿವೃದ್ಧಿಗೆ ಸಮೀಕ್ಷೆ ಮಾಡುತ್ತಿದ್ದೇವೆ. ಇನ್ನೆರಡು ದಿನದಲ್ಲಿ ಪೂರ್ಣಗೊಳ್ಳಲಿದೆ. ಸಮೀಕ್ಷೆ ವಿರೋಧಿಸುವವರು ಸಮ ಸಮಾಜದ ವಿರೋಧಿಗಳು. ಯೋಜನೆ ರೂಪಿಸಲು ಅಂಕಿ ಅಂಶಗಳು ಬೇಕು. ಸಮೀಕ್ಷೆ ಬೇಡ ಎನ್ನುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕೇಂದ್ರ ನಡೆಸುವ ಜಾತಿ ಗಣತಿ ವಿರೋಧಿಸುತ್ತಾರಾ ? ಬದಲಾವಣೆ ಬೇಡದವರು ಬೇಡ ಎನ್ನುತ್ತಾರೆಂದು ಸಮರ್ಥಿಸಿಕೊಂಡರು.