ನ್ಯೂಸ್

ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರಿಗೆ ಕರೊನಾ ಸೋಂಕು: ಆಸ್ಪತ್ರೆಗೆ ಅಡ್ಮಿಟ್​

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನವರಿಗೆ ಕರೊನಾ ಸೋಂಕು ತಗುಲಿದೆ. ಅವರೇ ಈ ಬಗ್ಗೆ ಟ್ವೀಟ್​ ಮಾಡಿ ತಿಳಿಸಿದ್ದಾರೆ.

ನನ್ನ ಕರೊನಾ ಪರೀಕ್ಷಾ ವರದಿ ಪಾಸಿಟಿವ್​ ಎಂದು ಬಂದಿದೆ. ರೋಗ ಲಕ್ಷಣಗಳು ಇಲ್ಲದೆ ಹೋದರೂ ಮುನ್ನೆಚ್ಚರಿಕಾ ಕ್ರಮವಾಗಿ, ವೈದ್ಯರ ಸಲಹೆಯ ಮೇರೆಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕೊವಿಡ್​-19 ಟೆಸ್ಟ್​ಗೆ ಒಳಗಾಗಿ ಎಂದು ಮುಖ್ಯಮಂತ್ರಿ ಹೇಳಿದ್ದಾರೆ. ಅಷ್ಟೇ ಅಲ್ಲ ಈಗಲೇ ಕ್ವಾರಂಟೈನ್​ಗೆ ಒಳಗಾಗಿ ಎಂದು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಿಎಂ ಕಚೇರಿ-ನಿವಾಸದಲ್ಲಿ 7 ಮಂದಿಗೆ ಕರೊನಾ ಸೋಂಕು, ಹೋಂ ಕ್ವಾರಂಟೈನ್​ನಲ್ಲಿ ಯಡಿಯೂರಪ್ಪ

ಇತ್ತೀಚೆಗೆ ಸಿಎಂ ಕಚೇರಿ-ನಿವಾಸ ಸೇರಿ 7 ಜನರಲ್ಲಿ ಕರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಕೂಡ ಒಂದು ವಾರ ಹೋಂ ಕ್ವಾರಂಟೈನ್​ಗೆ ಒಳಗಾಗಿದ್ದರು. ನಂತರ ಮಾಡಿದ ಕೊವಿಡ್​-19 ಟೆಸ್ಟ್ ವರದಿ ಜುಲೈ 18ರಂದು ಹೊರಬಿದ್ದಿತ್ತು. ಅದರಲ್ಲಿ ನೆಗೆಟಿವ್​ ಎಂದು ಹೇಳಲಾಗಿತ್ತು. ಆದರೆ ಈಗ ಮಾಡಿಸಿದ ಟೆಸ್ಟ್​ನಲ್ಲಿ ಸೋಂಕು ಇರುವುದು ದೃಢಪಟ್ಟಿದೆ.