ನವದೆಹಲಿ: ಪಹಲ್ಲಾಮ್ ದಾಳಿ ಹಾಗೂ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ಹಿನ್ನೆಲೆಯಲ್ಲಿ ಭಯೋತ್ಪಾದನೆ ಕುರಿತು ಜಗತ್ತಿಗೆ ಮನವರಿಕೆ ಮಾಡಿಕೊಡುವ ಕೇಂದ್ರ ಸರಕಾರದ ಪ್ರಯತ್ನದ ಭಾಗವಾಗಿ ವಿದೇಶಗಳಿಗೆ ತೆರಳಿರುವ ಭಾರತೀಯ ನಿಯೋಗವನ್ನು ಶಶಿ ತರೂರ್ ಮುನ್ನಡೆಸುತ್ತಿದ್ದಾರೆ. ಅಮೆರಿಕ ಮತ್ತು ಪನಾಮಾದಲ್ಲಿನ ಕಾರ್ಯಕ್ರಮಗಳ ನಂತರ, ಇದೀಗ ಭಾರತೀಯ ನಿಯೋಗವು ಬೊಗೊಟಾದತ್ತ ಪ್ರಯಾಣ ಬೆಳೆಸಿದೆ.
ಇದನ್ನೂ ಓದಿ: ಆಪರೇಷನ್ ಸಿಂಧೂರ್ ಸಮಯದಲ್ಲಿ ಹಾಲು, ಲಸ್ಸಿ ವಿತರಿಸಿದ್ದ 10 ವರ್ಷದ ಬಾಲಕನಿಗೆ ಸೇನೆಯಿಂದ ಸನ್ಮಾನ| honoured
ಇದೇ ವೇಳೆ ಶಶಿ ತರೂರ್ ವಿರುದ್ಧವೂ ಟೀಕೆ ಮಾಡಿದ್ದ ಅವರು, ಇತಿಹಾಸದಲ್ಲೇ ಮೊದಲ ಬಾರಿಗೆ ಗಡಿದಾಟಿ ಪಾಕಿಸ್ತಾನದ ಮೇಲೆ ದಾಳಿ ನಡೆಸಿದೆ ಎಂದು ಹೇಳಿದ್ದಾರೆ. ಪ್ರಧಾನಿ ಮೋದಿ ನಿಮ್ಮನ್ನು ಬಿಜೆಪಿಯ ಸೂಪರ್ ವಕ್ತಾರರೆಂದು ಘೋಷಿಸಬೇಕೆಂದು ಒತ್ತಾಯಿಸುತ್ತೇನೆ. ಭಾರತಕ್ಕೆ ಬರುವ ಮೊದಲು ನಿಮ್ಮನ್ನು ವಿದೇಶಾಂಗ ಸಚಿವ ಎಂದೂ ಘೋಷಿಸಬೇಕೆಂದು ತಿಳಿಸಿದ್ದರು.
ಸರ್ಜಿಕಲ್ ಸ್ಟ್ರೈಕ್ ಮತ್ತು ಆಪರೇಷನ್ ಸಿಂಧೂರ್ ಬಗ್ಗೆ ಕಾಂಗ್ರೆಸ್ ನಾಯಕ ಉದಿತ್ ರಾಜ್ ಪ್ರಶ್ನೆ ಎತ್ತಿದ್ದಾರೆ. ಕಾಂಗ್ರೆಸ್ ಸರ್ಕಾರ ಪಾಕಿಸ್ತಾನದ ಮೇಲೆ 6 ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಿತು. ಆದರೆ ಪಕ್ಷ ಅದರ ಕ್ರೆಡಿಟ್ ತೆಗೆದುಕೊಳ್ಳಲಿಲ್ಲ. ಭಾರತೀಯ ಸೇನೆಯು ಆಪರೇಷನ್ ಸಿಂಧೂರ್ ಅನ್ನು ಅದ್ಭುತವಾಗಿ ನಡೆಸಿತು, ಅದಕ್ಕೆ ಸೆಲ್ಯೂಟ್. ಆದರೆ, ಪ್ರಚಾರ ಮಾಡುತ್ತಿರುವ ಬಿಜೆಪಿ ಯಾವ ಸರ್ಜಿಕಲ್ ಸ್ಟ್ರೈಕ್ ನಡೆಸಿತು, ಕಾಂಗ್ರೆಸ್‌ಗೆ ಸೈನ್ಯವನ್ನು ಹೇಗೆ ಗೌರವಿಸಬೇಕೆಂದು ತಿಳಿದಿದೆ, ಆದರೆ ಬಿಜೆಪಿ ಸೇನೆಗೆ ಅವಮಾನ ಮಾಡುವುದನ್ನು ನಾವು ಸಹಿಸುವುದಿಲ್ಲ ಎಂದು ಹೇಳಿದ್ದರು.
ಆದರೆ, ಕಾರ್ಯಾಚರಣೆ ಕುರಿತು ಕಾಂಗ್ರೆಸ್ ಹಲವು ಟೀಕೆಗಳನ್ನು ಮಾಡುತ್ತಿದ್ದು, ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ನಾಯಕ ಮತ್ತು ಸಂಸದ ಶಶಿ ತರೂರ್ ಅವರು ತಿರುಗೇಟು ನೀಡಿದ್ದಾರೆ.
ಇದನ್ನೂ ಓದಿ: ಭಾರತದಲ್ಲಿ ವಾಸಿಸುವ 240 ಮಿಲಿಯನ್ ಹೆಮ್ಮೆಯ ಭಾರತೀಯ ಮುಸ್ಲಿಮರು; ಅಸಾದುದ್ದೀನ್ ಓವೈಸಿ| Asaduddin Owaisi
ಈ ಟೀಕೆಗೆ ಇದೀಗ ತಿರುಗೇಟು ನೀಡಿರುವ ಶಶಿ ತರೂರ್ ಅವರು, ಪನಾಮದಲ್ಲಿನ ಸುದೀರ್ಘ ಹಾಗೂ ಯಶಸ್ವಿ ದಿನದ ನಂತರ, ನಾನು ಮಧ್ಯರಾತ್ರಿಯಲ್ಲಿ ನನ್ನ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದ್ದು, ಇನ್ನು 6 ಗಂಟೆಗಳಲ್ಲಿ ಬೊಗೊಟಾ, ಕೊಲಂಬಿಯಾಗೆ ತೆರಳಬೇಕಿದೆ. ಹೀಗಾಗಿ, ನನಗೆ ಇದಕ್ಕೆಲ್ಲ ಯಾವುದೇ ಸಮಯವಿಲ್ಲ. ಆದರೆ, ಗಡಿ ನಿಯಂತ್ರಣ ರೇಖೆಯ ಬಳಿ ಭಾರತೀಯ ಯೋಧರು ತೋರಿರುವ ಪರಾಕ್ರಮದ ಬಗ್ಗೆ ನಾನು ತೋರಿರಬಹುದಾದ ನಿರ್ಲಕ್ಷ್ಯದ ಕುರಿತು ಅಸೂಯೆಯಿಂದ ಕುದಿಯುತ್ತಿರುವರಿಗೆ ನಾನು ಸ್ಪಷ್ಟವಾಗಿ ಹಾಗೂ ನಿರ್ದಿಷ್ಟವಾಗಿ ಭಯೋತ್ಪಾದಕ ದಾಳಿಗಳ ವಿರುದ್ಧ ಪ್ರತೀಕಾರದ ಕುರಿತು ಮಾತ್ರ ಮಾತನಾಡುತ್ತಿದ್ದೇನೆಯೇ ಹೊರತು, ಹಿಂದಿನ ಯುದ್ಧಗಳ ಕುರಿತಂತಲ್ಲ.
(ಏಜೆನ್ಸೀಸ್)
ನಿನ್ನೆ ಪನಾಮ ನಗರದಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ತರೂರ್, ಇತ್ತೀಚಿನ ವರ್ಷಗಳಲ್ಲಿ ಬದಲಾಗಿರುವುದು ಏನೆಂದರೆ, ಭಯೋತ್ಪಾದಕರು ಸಹ ತಾವು ಬೆಲೆ ತೆರಬೇಕಾಗುತ್ತದೆ ಎಂಬುದನ್ನು ಅರಿತುಕೊಂಡಿದ್ದಾರೆ. ಅದರ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದಿದ್ದಾರೆ.
ಇತ್ತೀಚಿನ ವರ್ಷಗಳೊಂದರಲ್ಲೇ ನಡೆದಿರುವ ಹಲವಾರು ಭಯೋತ್ಪಾದಕ ದಾಳಿಗಳ ಉಲ್ಲೇಖಗಳನ್ನು ಆಧರಿಸಿ ನನ್ನ ಹೇಳಿಕೆಗಳಿದ್ದು, ಈ ಹಿಂದೆ ಭಾರತದ ಪ್ರತಿಕ್ರಿಯೆಯನ್ನು ಗಡಿ ನಿಯಂತ್ರಣ ರೇಖೆ ಹಾಗೂ ಅಂತಾರಾಷ್ಟ್ರೀಯ ಗಡಿ ಬಗೆಗಿನ ನಮ್ಮ ಜವಾಬ್ದಾರಿಯುತ ಗೌರವಕ್ಕೆ ಮಾತ್ರ ನಿರ್ಬಂಧಿಸಲಾಗಿತ್ತು ಹಾಗೂ ಸೀಮಿತಗೊಳಿಸಲಾಗಿತ್ತು ಎಂದು ತಿಳಿಸಲು ಬಯಸುತ್ತೇನೆ ಎಂದು ಹೇಳಿದ್ದಾರೆ.