ನ್ಯೂಸ್

ನಾನು ಪ್ರೀತಿಯಿಂದ ಹೇಳಿದ್ದೇನೆ; ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದ ಕಮಲ್​ ಹಾಸನ್​| kamal-haasan

kamal-haasan| ಥಗ್ ಲೈಫ್ ಚಿತ್ರದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಕನ್ನಡ ಭಾಷೆಯ ಬಗ್ಗೆ ಹೇಳಿಕೆ ನೀಡಿ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ಖ್ಯಾತ ನಟ ಕಮಲ್ ಹಾಸನ್​ ಇದೀಗ ತಮ್ಮ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಕನ್ನಡ ತಮಿಳಿನಿಂದ ಹುಟ್ಟಿತು ಎಂಬ ತಮ್ಮ ಹೇಳಿಕೆಯ ಸುತ್ತಲಿನ ಇತ್ತೀಚಿನ ವಿವಾದಕ್ಕೆ ಪ್ರತಿಕ್ರಿಯಿಸಿದ ನಟ ಕಮಲ್ ಹಾಸನ್, ಪ್ರೀತಿಯಿಂದ ಮಾತನಾಡಿದ ವಿಷಯಕ್ಕೆ ಕ್ಷಮೆಯಾಚಿಸುವುದಿಲ್ಲ ಎಂದು ಹೇಳಿದ್ದಾರೆ. ನು ಪ್ರೀತಿಯಿಂದ ಹೇಳಿದ್ದು ಮತ್ತು ಅನೇಕ ಇತಿಹಾಸಕಾರರು ನನಗೆ ಭಾಷೆ, ಇತಿಹಾಸ ಕಲಿಸಿದ್ದಾರೆ. ನಾನು ಏನನ್ನೂ ಅರ್ಥೈಸಲಿಲ್ಲ ಎಂದಿದ್ದಾರೆ.

ಸಿನಿಮಾ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾಷೆ ಬಗ್ಗೆ ಮಾತಾಡಲು ರಾಜಕಾರಣಿಗಳಿಗೆ ಅರ್ಹತೆ ಇಲ್ಲ. ಅನೇಕ ಇತಿಹಾಸಕಾರರು ನನಗೆ ಭಾಷಾ ಇತಿಹಾಸವನ್ನು ಕಲಿಸಿದ್ದಾರೆ. ತಮಿಳುನಾಡು ಒಂದು ವಿಶಾಲ ಹೃದಯ ರಾಜ್ಯ. ಒಬ್ಬ ಮೆನನ್ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಒಬ್ಬ ರೆಡ್ಡಿ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಒಬ್ಬ ತಮಿಳರು ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ಒಬ್ಬ ಕನ್ನಡಿಗ ಅಯ್ಯಂಗಾರ್ ನಮ್ಮ ಮುಖ್ಯಮಂತ್ರಿಯಾಗಿದ್ದಾರೆ. ನಾನು ಸಮಸ್ಯೆಗೆ ಸಿಲುಕಿದಾಗ ನನಗೆ ಬೆಂಬಲವಾಗಿ ಕನ್ನಡಿಗರು ನಿಂತಿದ್ರು. ಚೆನ್ನೈನಲ್ಲಿ ಸಮಸ್ಯೆ ಆದಾಗ ಕನ್ನಡಿಗರು ಸಪೋರ್ಟ್ ಮಾಡಿದ್ರು. ನನ್ನ ಸಿನಿಮಾಗಳನ್ನ ಅಭಿಮಾನಿಗಳು ನೋಡ್ತಾರೆ, ರಾಜಕಾರಣಿಗಳಿಗೆ ಭಾಷಾ ಜ್ಞಾನ ಇಲ್ಲ. ನನ್ನ ಪ್ರಕಾರ ನನ್ನ ಹೇಳಿಕೆ ಸರಿ ಇದೆ" ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

(ಏಜೆನ್ಸೀಸ್)