ಲಂಡನ್: ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡ ಮುಂಬರುವ ಏಕದಿನ ವಿಶ್ವಕಪ್ ಟೂರ್ನಿಗೆ ಪರಿಷ್ಕೃತ ಆಟಗಾರರ ಪಟ್ಟಿಯನ್ನು ಬಿಡುಗಡೆಗೊಳಿಸಿದೆ. ಸಂಭಾವ್ಯ 15 ಆಟಗಾರರ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದ ಆರಂಭಿಕ ಜೇಸನ್ ರಾಯ್ ಬದಲಿಗೆ ಯುವ ಬ್ಯಾಟರ್ ಹ್ಯಾರಿ ಬ್ರೂಕ್ ಅವರನ್ನು ತಂಡಕ್ಕೆ ಸೇರ್ಪಡೆ ಮಾಡಿದೆ.
ಬೆನ್ನುನೋವಿನಿಂದ ಬಳಲುತ್ತಿರುವ ಜೇಸನ್ ರಾಯ್ ಇತ್ತಿಚೆಗೆ ಮುಕ್ತಾಯಗೊಂಡ ನ್ಯೂಜಿಲೆಂಡ್ ವಿರುದ್ಧ ಸರಣಿಯಿಂದಲೂ ಹೊರಗುಳಿದಿದ್ದರು. ನಾಲ್ಕು ವರ್ಷಗಳ ಹಿಂದೆ ಆತಿಥೇಯ ತಂಡವಾಗಿ ಪ್ರಶಸ್ತಿ ಗೆದ್ದಿದ್ದ ಇಂಗ್ಲೆಂಡ್ ತಂಡದ ಭಾಗವಾಗಿದ್ದ ಎಂಟು ಆಟಗಾರರು ಈ ಬಾರಿಯೂ ಕಣಕ್ಕಿಳಿಯಲಿದ್ದಾರೆ. ತಂಡ: ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಗಸ್ ಅಟ್ಕಿನ್ಸನ್, ಜಾನಿ ಬೇರ್ ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ‌್ರನ್, ಲಿಯಾಮ್ ಲಿವಿಂಗ್‌ಸ್ಟೋನ್, ಡೇವಿಡ್ ಮಲಾನ್, ಆದಿಲ್ ರಶೀದ್, ಜೋ ರೂಟ್, ಬೆನ್ ಸ್ಟೋಕ್ಸೃ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ, ಮಾರ್ಕ್ ವುಡ್, ಕ್ರಿಸ್ ವೋಕ್ಸೃ್.