ನ್ಯೂಸ್

ಭಾರತದಲ್ಲಿರುವ ಪಾಕಿಸ್ತಾನಿಗಳನ್ನು ಗುರುತಿಸಿ, ವಾಪಸ್ ಕಳುಹಿಸಿ; ಮುಖ್ಯಮಂತ್ರಿಗಳಿಗೆ 'ಅಮಿತ್ ಶಾ' ಸೂಚನೆ| Amith shah

Delhi: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಐದು ಹಂತದ ರಾಜತಾಂತ್ರಿಕ ಪ್ರತಿದಾಳಿಯ ಭಾಗವಾಗಿ ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾಗಳನ್ನು ರದ್ದುಗೊಳಿಸಿರುವುದಾಗಿ ಭಾರತ ತಿಳಿಸಿದೆ. ಇದೀಗ ಭಾರತದಲ್ಲಿ ವಾಸಿಸುತ್ತಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಗಡೀಪಾರು ಮಾಡುವಂತೆ ಮುಖ್ಯಮಂತ್ರಿಗಳಿಗೆ 'ಅಮಿತ್ ಶಾ' ಕರೆ ನೀಡಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈ ವಿಷಯದ ಬಗ್ಗೆ ಎಲ್ಲಾ ಮುಖ್ಯಮಂತ್ರಿಗಳೊಂದಿಗೆ ಮಾತನಾಡುತ್ತಿದ್ದು, ಆಯಾ ರಾಜ್ಯಗಳಲ್ಲಿರುವ ಎಲ್ಲಾ ಪಾಕಿಸ್ತಾನಿ ಪ್ರಜೆಗಳನ್ನು ಗುರುತಿಸಿ ಅವರು ಪಾಕಿಸ್ತಾನಕ್ಕೆ ಬೇಗನೆ ಮರಳುವಂತೆ ಕ್ರಮ ಕೈಗೊಳ್ಳುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳನ್ನು ತಿಳಿಸಿವೆ.

(ಏಜೆನ್ಸೀಸ್)