ಶಿಕಾರಿಪುರ ಟಿಎಪಿಸಿಎಂಎಸ್ ವಜ್ರಮಹೋತ್ಸವ ಕಾರ್ಯಕ್ರಮದಲ್ಲಿ ಸಹಕಾರ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು. ಬಿ.ಎಸ್.ಯಡಿಯೂರಪ್ಪ, ಬಿ.ವೈ.ರಾಘವೇಂದ್ರ, ಸುಧೀರ್, ಕೆ.ಎಸ್.ಗುರುಮೂರ್ತಿ, ಡಿ.ಎಲ್.ಬಸವರಾಜ್, ಚನ್ನವೀರಪ್ಪ, ಬಿ.ಡಿ.ಭೂಕಾಂತ್ ಇತರರಿದ್ದರು. ಪ್ರಜಾಪ್ರಭುತ್ವಕ್ಕಾಗಿ ಸಂವಿಧಾನವನ್ನು ರಕ್ಷಿಸಿ ಮತಗಳ್ಳತನ, ಕೇಂದ್ರ ಸರ್ಕಾರ, ಬಿಜೆಪಿ, ಅಧಿಕಾರ ದುರ್ಬಳಕೆ, Vote Fraud, Central Government, BJP, Abuse of Power, Protect the Constitution for Democracy ಸೊರಬ: ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ. ಮತಗಳ್ಳರೇ ಅಧಿಕಾರ ಬಿಡಿ ಎಂದು ಶುಕ್ರವಾರ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಚೇರಿಯಿಂದ ತಹಸೀಲ್ದಾರ್ ಕಚೇರಿವರೆಗೂ ಮೆರವಣಿಗೆ ನಡೆಸಿದರು. ಸುಳ್ಳು ಭರವಸೆ ನೀಡುವ ಮೂಲಕ ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದೆ. ಇದೀಗ ಮತಗಳ್ಳತನದ ಹಾದಿ ಹಿಡಿದಿದೆ. ಉದ್ಯೋಗ ಸೃಷ್ಟಿ, ಕಪ್ಪು ಹಣ ವಾಪಸ್ ತರುವ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದ ಕೇಂದ್ರ ಸರ್ಕಾರ ಇದೀಗ ಮತಗಳ್ಳತನಕ್ಕೆ ನಿಂತಿದೆ. ಮಹಾದೇವಪುರ ಕ್ಷೇತ್ರವೊಂದರಲ್ಲಿಯೇ ಒಂದು ಲಕ್ಷಕ್ಕೂ ಅಧಿಕ ಮತಗಳನ್ನು ಕಳ್ಳತನ ಮಾಡಲಾಗಿದೆ. ಇನ್ನು ಕೆಲವೆಡೆ ಬದುಕಿದ್ದವರನ್ನೂ ಮೃತಪಟ್ಟಿದ್ದಾರೆ ಎಂದು ಹೇಳಿ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಕಾಂಗ್ರೆಸ್ ಮುಖಂಡ ಎಚ್.ಗಣಪತಿ ದೂರಿದರು. ಬಿಜೆಪಿ ಹಿಂಬಾಗಿಲಿನಿಂದ ಅಧಿಕಾರ ಪಡೆಯುವ ಕೆಲಸ ಮಾಡುತ್ತಿದೆ. ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಇದೀಗ ಚುನಾವಣಾ ಆಯೋಗದ ಸರದಿ. ಇದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಕ್ಕೆ ಮಾಡಿರುವ ಅಪಮಾನ ಎಂದು ಆನವಟ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾನಂದ ಗೌಡ ಹೇಳಿದರು. ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ, ಕೆ.ವಿ.ಗೌಡ, ಕಲ್ಲಪ್ಪ, ಲಕ್ಷ್ಮಮ್ಮ. ಶಿವಪ್ಪ, ಶ್ರೀಕಾಂತ, ಮುಕ್ತಿಯಾರ್, ರಸೀದ್, ರತ್ನಮ್ಮ, ಪ್ರವೀಣ್, ಮಿಲನ್‌ಕುಮಾರ್, ವೀರೇಂದ್ರ ಗೌಡ, ಸಂಜೀವ್ ಇತರರಿದ್ದರು. =========== 15 ಎಸ್‌ಒಆರ್ 2 ಸೊರಬದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ಧ ಜಾಥಾ ನಡೆಸಿದರು. ಎಚ್.ಗಣಪತಿ, ಸದಾನಂದ ಗೌಡ, ಅಣ್ಣಪ್ಪ, ಕೆ.ವಿ.ಗೌಡ, ಕಲ್ಲಪ್ಪ ಇತರರಿದ್ದರು. 
ನ್ಯೂಸ್

ಆಡಳಿತದಲ್ಲಿ ಶಿಸ್ತಿದ್ದರೆ ಸಂಘಗಳ ಉನ್ನತಿ ಸಾಧ್ಯ

ಶಿಕಾರಿಪುರ: ಸಹಕಾರ ಸಂಘಗಳು ಕೃಷಿಕರಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿವೆ. ಹಾಗಾಗಿ ಕ್ಷೇತ್ರವನ್ನು ನಾವು ಇನ್ನಷ್ಟು ಬಲಗೊಳಿಸಬೇಕಾದ ಅಗತ್ಯವಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು.

ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಭಾನುವಾರ ಆಯೋಜಿಸಿದ್ದ ಟಿಎಪಿಸಿಎಂಎಸ್ ವಜ್ರಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಂದು ಸಂಸ್ಥೆ ಶಿಸ್ತು, ಸಮರ್ಥ ಆಡಳಿತದಿಂದ ವಜ್ರಮಹೋತ್ಸವ ಆಚರಿಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಸಹಕಾರ ಕ್ಷೇತ್ರದ ಬ್ಯಾಂಕ್‌ಗಳು ಇಂದು ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಸರಿಸಮನಾಗಿ ಕಾರ್ಯನಿರ್ವಹಿಸುತ್ತಿವೆ. ಸಹಕಾರಿಗಳು ಸಹಕಾರ ಸಂಘಗಳನ್ನು ಬೆಳೆಸುವ ಕಾರ್ಯ ಮಾಡಬೇಕು. ನಾನು ಅಧಿಕಾರದಲ್ಲಿದ್ದಾಗ ತಾಲೂಕನ್ನು ಒಂದು ಮಾದರಿ ತಾಲೂಕನ್ನಾಗಿ ಮಾಡಲು ಶಕ್ತಿಮೀರಿ ಪ್ರಯತ್ನಿಸಿದ್ದೇನೆ. ತಾಲೂಕಿನ ಜನರ ಸಹಕಾರದಿಂದ ಮೂರು ಬಾರಿ ಮುಖ್ಯಮಂತ್ರಿಯಾಗಿ ನಾಡಿನ ಜನರ ಸೇವೆ ಮಾಡಿದ್ದೇನೆ. ನಿಮ್ಮೆಲ್ಲರ ಆಶಯಕ್ಕೆ ತಕ್ಕಂತೆ ಕೆಲಸ ಮಾಡಿದ ತೃಪ್ತಿಯಿದೆ ಎಂದು ಅಭಿಪ್ರಾಯಪಟ್ಟರು.

ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿ, ಸಹಕಾರ ಕ್ಷೇತ್ರ ಹೊಸ ಇತಿಹಾಸವನ್ನೇ ನಿರ್ಮಿಸಿದೆ. ಸಹಕಾರ ಕ್ಷೇತ್ರ ತುಂಬ ಎತ್ತರಕ್ಕೆ ಬೆಳೆದು ನಿಂತಿದೆ. ಸಹಕಾರಿಗಳ ನಿಸ್ವಾರ್ಥ ಸೇವೆಯ ಫಲ. ಸಹಕಾರ ತತ್ವ ವೇ ಸಂಘಟನೆಯ ಮೂಲ ಅಡಿಪಾಯ. ನಾಡಿನ ಅಭಿವೃದ್ಧಿ ಆಗಬೇಕಾದರೆ ಸಹಕಾರ ಕ್ಷೇತ್ರ ಬೆಳೆಯಬೇಕು ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಆಶಯ. ಅದಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಶಿಕಾರಿಪುರ ತಾಲೂಕು ಜಿಲ್ಲೆಯಲ್ಲೇ ಅತಿ ಹೆಚ್ಚು ಸಹಕಾರ ಸಂಘಗಳು ಇರುವಂತಹ ತಾಲೂಕು ಎಂದರು.

ಯಡಿಯೂರಪ್ಪ ಅವರು ಅಧಿಕಾರದಲ್ಲಿದ್ದಾಗ ತಾಲೂಕಿನ ರೈತರಿಗೆ ಅನುಕೂಲವಾಗುವ ದೃಷ್ಟಿಯಿಂದ ಉಡುಗಣಿ, ತಾಳಗುಂದ, ಹೊಸೂರು ಹೋಬಳಿಯ ಕೆರೆಗಳನ್ನು ತುಂಗಭದ್ರಾ ನದಿಯಿಂದ ನೀರು ತಂದು ತುಂಬಿಸಲಾಗುತ್ತಿದೆ. ಶಿವಮೊಗ್ಗ ಸಮೀಪದ ಹೊಸಳ್ಳಿ ಹತ್ತಿರ ತುಂಗಾ ನದಿಯಿಂದ ಅಂಜನಾಪುರ ಜಲಾಶಯಕ್ಕೆ ನೀರು ತುಂಬಿಸಲಾಗುತ್ತಿದೆ. ಕಾಳೇನಹಳ್ಳಿ ಸಮೀಪದ ಬ್ಯಾರೇಜ್ ಕೂಡ ತಾಲೂಕಿನ ರೈತರಿಗೆ ವರದಾನವಾಗಿದೆ ಎಂದು ಹೇಳಿದರು.

ತಾಲೂಕಿನ ಜನತೆಯ ಹಿತದೃಷ್ಟಿಯಿಂದ ಶಿವಮೊಗ್ಗ-ರಾಣೆಬೆನ್ನೂರು ರೈಲ್ವೆ ಯೋಜನೆ ಕಾಮಗಾರಿ ಭರದಿಂದ ನಡೆಯುತ್ತಿದೆ. ತಾಲೂಕನ್ನು ಪ್ರವಾಸಿ ತಾಣ ಮಾಡುವ ದೃಷ್ಟಿಯಿಂದ ಶರಣೆ ಅಕ್ಕಮಹಾದೇವಿ ಜನ್ಮಸ್ಥಳ ಉಡುಗಣಿಯನ್ನು ದೆಹಲಿಯ ಅಕ್ಷರಧಾಮದ ಮಾದರಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಕಾಳೇನಹಳ್ಳಿ ಸಮೀಪ ರೈತರಿಗೆ ಅನುಕೂಲವಾಗುವಂತೆ ಕೋಲ್ಡ್ ಸ್ಟೋರೇಜ್ ಘಟಕ ನಿರ್ಮಾಣವಾಗುತ್ತಿದೆ ಎಂದರು.

ಟಿಎಪಿಸಿಎಂಎಸ್ ಅಧ್ಯಕ್ಷ ಸುಧೀರ್ ಮಾರವಳ್ಳಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ಡಿ.ಎಲ್.ಬಸವರಾಜ್, ಎಂಎಡಿಬಿ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಚನ್ನವೀರಪ್ಪ, ನಗರದ ಮಹದೇವಪ್ಪ, ಶಶಿಧರ್, ಬಿ.ಡಿ.ಭೂಕಾಂತ್, ಮಾಜಿ ರಾಘವೇಂದ್ರ ಇತರರಿದ್ದರು.